ETV Bharat / state

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಕಾಂಗ್ರೆಸ್​ ಕಾರ್ಯಕರ್ತೆಯರ ವಿರುದ್ಧ ಮೊಕದ್ದಮೆ ದಾಖಲು - ಬೆಂಗಳೂರು ಲೇಟೆಸ್ಟ್​ ಅಪ್ಡೇಟ್​ ನ್ಯೂಸ್​

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಬುಧವಾರ ನೀಡಿದ್ದ ಏಕಪತ್ನಿವ್ರತಸ್ಥ ಮತ್ತು ಶಾಸಕರ ಕುರಿತ ಚಾರಿತ್ರ್ಯ ಸವಾಲಿಗೆ ಕೆಂಡಾಮಂಡಲವಾಗಿರುವ ಕಾಂಗ್ರೆಸ್​ ಕಾರ್ಯಕರ್ತೆಯರು ಇಂದು ಪ್ರತಿಭಟನೆ ನಡೆಸಿದರು. ಸುಧಾಕರ್​ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕೈ ನಾಯಕಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Attack on CM House
ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ
author img

By

Published : Mar 25, 2021, 7:05 PM IST

ಬೆಂಗಳೂರು: ನಗರದಲ್ಲಿ ಸಿಎಂ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ಮಾಡಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತೆಯರ ವಿರುದ್ಧ ಪ್ರಕರಣ ದಾಖಲಾಗಿದೆ.

ಕುಮಾರ ಕೃಪಾ ರಸ್ತೆಯಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತೆಯರನ್ನು ತಡೆದ ಪೊಲೀಸರು ಭಿತ್ತಿ ಪತ್ರ ಕಿತ್ತುಕೊಂಡು ಬಂಧಿಸಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ, ಪರವಾನಗಿ ಪಡೆಯದೆ ಸಿಎಂ ನಿವಾಸಕ್ಕೆ ಆಗಮಿಸಿದ ಕಾರ್ಯಕರ್ತೆಯರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಬೇಕು ಎಂದು ಪಟ್ಟು ಹಿಡಿದರು. ಆದರೆ ಭೇಟಿಗೆ ಸಿಎಂ ಪರವಾನಗಿ ಇಲ್ಲದ ಹಿನ್ನೆಲೆ ಪೊಲೀಸರು ಕೃಷ್ಣಾದ ಮುಂಭಾಗದಲ್ಲೇ ತಡೆದರು.

ಮೊದಲೇ ತಿಳಿಸದ ಹಿನ್ನೆಲೆ ಸೂಕ್ತ ಸಂಖ್ಯೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಸಹ ಅಲ್ಲಿ ಇರಲಿಲ್ಲ. ಕೆಲ ಕಾಲ ಪುರುಷ ಸಿಬ್ಬಂದಿಯೇ ಕಾರ್ಯಕರ್ತೆಯರನ್ನು ತಡೆಯುವ ಪ್ರಯತ್ನ ನಡೆಸಿ ಹೊರಗಿನಿಂದ ಮಹಿಳಾ ಸಿಬ್ಬಂದಿಯನ್ನು ಕರೆಸಿಕೊಂಡರು. ಅನಿರೀಕ್ಷಿತ ಬೆಳವಣಿಗೆಯ ಜೊತೆಗೆ ಅವಸರದಲ್ಲಿ ಕಾರ್ಯಕರ್ತೆಯರನ್ನು ಬಂಧಿಸಲು ಮುಂದಾದ ಸಂದರ್ಭ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್​ ಕೆಳಗೆ ಬಿದ್ದರು.

ಸುಧಾಕರ್ ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ಸಿಎಂ ಗೃಹ ಕಚೇರಿ ಮುತ್ತಿಗೆ ಹಾಕಲು ಮುಂದಾದ ಕೈ ನಾಯಕಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನಿರೀಕ್ಷಿತವಾಗಿ ಆಗಮಿಸಿ ದಾಂಧಲೆ ನಡೆಸಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರ್ಯಕರ್ತೆಯರು ಆಗಮಿಸಿದ ಕಾರುಗಳ ನೋಂದಣಿ ಸಂಖ್ಯೆ ಆಧರಿಸಿ ಕೇಸ್​ ದಾಖಲಿಸಿಕೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಸಹ ಆಗಿರುವುದರಿಂದ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ. ಅಲ್ಲದೇ ಈ ಘಟನೆ ಬಳಿಕ ಸಿಎಂ ಗೃಹ ಕಚೇರಿ ಕೃಷ್ಣಾಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಬುಧವಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ ಅವರು ಎಲ್ಲ 224 ಶಾಸಕರ ವೈಯಕ್ತಿಕ ಚಾರಿತ್ರ್ಯದ ಕುರಿತು ತನಿಖೆ ಆಗಲಿ, ಯಾರೂ ಸತ್ಯಹರಿಶ್ಚಂದ್ರರಲ್ಲ ಎಂಬ ಹೇಳಿಕೆ ನೀಡಿದ್ದರು. ಇದು ಆಡಳಿತ ಪಕ್ಷದ ಶಾಸಕರು ಸೇರಿದಂತೆ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಓದಿ: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತೆಯರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.