ETV Bharat / state

ಸ್ಥಳೀಯ ಸಂಸ್ಥೆ ಚುನಾವಣೆ: ಕ್ಷೇತ್ರ ಪುನರ್ವಿಂಗಡಣೆ ಗೆಜೆಟ್ ಅಧಿಸೂಚನೆ ಪ್ರಕಟಿಸಿರುವುದಾಗಿ ಹೈಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ - ಮುಂದಿನ 10 ದಿನಗಳಲ್ಲಿ ಅಧಿಸೂಚನೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರ, ಕ್ಷೇತ್ರದ ಪುನರ್ವಿಂಗಡಣೆ ಅಧಿಸೂಚನೆ ಪ್ರತಿಯನ್ನು ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಹೈಕೋರ್ಟ್​ ನ್ಯಾಯಪೀಠಕ್ಕೆ ಸಲ್ಲಿಕೆ ಮಾಡಿದ್ದಾರೆ.

highcourt
ಹೈಕೋರ್ಟ್​
author img

By

Published : Mar 1, 2023, 5:55 PM IST

ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಕುರಿತು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಚ್​ 1 ರಂದು ಅಧಿಸೂಚನೆ ಹೊರಡಿಸುವುದಾಗಿ ಹೈಕೋರ್ಟ್​ ಮಾಹಿತಿ ನೀಡಿದೆ. ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ಯ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತು.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್ ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಹಾಜರಾಗಿ, ಕ್ಷೇತ್ರದ ಪುನರ್ವಿಂಗಡಣೆಗೆ ಅಧಿಸೂಚನೆ ಹೊರಡಿಸಿರುವುದಾಗಿ ಅಧಿಸೂಚನೆ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.ಅಲ್ಲದೆ. ಈ ಹಿಂದೆ ನಡೆದ ವಿಚಾರಣೆ ವೇಳೆ ನಿಗದಿತ ಸಮಯಕ್ಕೆ ಚುನಾವಣೆ ಪ್ರಕ್ರಿಯೆ ನಡೆಸದಿರುವ ಸರ್ಕಾರದ ಕ್ರಮ ಉಲ್ಲೇಖಿಸಿ, ಹೈಕೋರ್ಟ್ 5 ಲಕ್ಷ ದಂಡ ವಿಧಿಸಿತು. ಈ ಮೊತ್ತವನ್ನು ಪಾವತಿಸಿರುವುದಾಗಿ ನ್ಯಾಯಪೀಠಕ್ಕೆ ವಿವರಿಸಿದರು.

ಅಲ್ಲದೇ.‌ಅರ್ಜಿದಾರರ ಪರ ಹಾಜರಿದ್ದ ವಕೀಲರು, ಹಿರಿಯ ವಕೀಲ ಕೆ.ಎನ್.ಫಣೀಂದ್ರ ಮತ್ತೊಂದು ನ್ಯಾಯಪೀಠದ ಮುಂದೆ ವಾದ ಮಂಡಿಸುತ್ತಿದ್ದ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಈ ಅಂಶ ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾರ್ಚ್​​ 2 ಕ್ಕೆ ಮುಂದೂಡಿತು.

ಮುಂದಿನ 10 ದಿನಗಳಲ್ಲಿ ಅಧಿಸೂಚನೆ ಭರವಸೆ:ಫೆಬ್ರವರಿ 14 ರಂದು ನಡೆದ ವಿಚಾರಣೆ ವೇಳೆ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಕ್ಷೇತ್ರ ಪುನರ್ ವಿಂಗಡಣೆ ಕುರಿತಂತೆ ಸರ್ಕಾರ ಸಮಿತಿ ರಚನೆ ಮಾಡಿದ್ದು, ಈ ಸಮಿತಿ 2022ರ ಜನವರಿ 30 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯ ಆಧಾರದಲ್ಲಿ ಅಧಿಸೂಚನೆ ಹೊರಡಿಸುವುದಕ್ಕಾಗಿ ಸರ್ಕಾರ ಸಿದ್ದವಿದೆ. ಮುಂದಿನ 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.

ಅಲ್ಲದೆ, ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳು ಮತ್ತು ಎಸ್ಸಿ ಎಸ್ಟಿ ಜನಾಂಗಕ್ಕೆ ಮೀಸಲಾತಿ ನೀಡುವ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಈ ಸಮಿತಿ ಏಪ್ರಿಲ್ 1 ರಂದು ಮೀಸಲಾತಿ ಪಟ್ಟಿ ಸಲ್ಲಿಸಲಿದೆ. ಈ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಜತೆಗೆ, ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆ ಸ್ವೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಈ ವೇಳೆಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿ ಅಧಿಸೂಚನೆ ಹೊರಡಿಸುವುದಾಗಿ ನ್ಯಾಯಪೀಠಕ್ಕೆ ಅಡ್ವೋಕೇಟ್ ಜನರಲ್ ವಿವರಿಸಿದರು.ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.

ಇದನ್ನೂಓದಿ:ರಾಜ್ಯದಲ್ಲಿ ಜನವಸತಿ ಇಲ್ಲದ ಗ್ರಾಮಗಳ ಪಟ್ಟಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.