ETV Bharat / state

ಬೆಂಗಳೂರು: ಆಟವಾಡುತ್ತಿದ್ದ ಬಾಲಕಿ ಈಜುಕೊಳದಲ್ಲಿ ಮುಳುಗಿ ಸಾವು - Swimming pool

ಈಜುಕೊಳದಲ್ಲಿ ಬಿದ್ದು ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Girl drowned in swimming pool in Bengaluru
ಸ್ವಿಮ್ಮಿಂಗ್​ ಪೂಲ್​ನಲ್ಲಿ ಮುಳುಗಿ ಬಾಲಕಿ ಸಾವು
author img

By ETV Bharat Karnataka Team

Published : Dec 29, 2023, 1:40 PM IST

Updated : Dec 29, 2023, 7:25 PM IST

ಬೆಂಗಳೂರು: ನಗರದಲ್ಲಿ ದುರಂತ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ವೇಳೆ ಆಯತಪ್ಪಿ ಈಜುಕೊಳದಲ್ಲಿ ಬಿದ್ದು ಬಾಲಕಿ ಮೃತಪಟ್ಟ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.

ಗುರುವಾರ ಸಂಜೆ 7.30ರ ವೇಳೆಗೆ ಅಪಾರ್ಟ್ಮೆಂಟ್​ನ ಸ್ವಿಮ್ಮಿಂಗ್ ​ಪೂಲ್ ಬಳಿ ಬಾಲಕಿ ಆಟವಾಡುತ್ತಿದ್ದಳು. ಈ ವೇಳೆ ಆಯತಪ್ಪಿ ಸ್ವಿಮ್ಮಿಂಗ್​ ಪೂಲ್​ಗೆ ಬಿದ್ದಿದ್ದಾಳೆ. ನೀರಿನಲ್ಲಿ ಬಿದ್ದು ಒದ್ದಾಡುತ್ತಿದ್ದಾಗ ಆಕೆಯನ್ನು ಕೆಲವರು ಗಮನಿಸಿ, ಕೂಡಲೇ ಸಹಾಯಕ್ಕೆ ದೌಡಾಯಿಸಿದ್ದಾರೆ. ಬಳಿಕ ಈಜುಕೊಳದಿಂದ ಮೇಲಕ್ಕೆತ್ತಿ ಹೊರತಂದಿದ್ದಾರೆ. ಆದರೆ, ಬಾಲಕಿ ನೀರಿನಲ್ಲಿ ಬಿದ್ದಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದಳು. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಘಟನೆ ಕುರಿತು ಮೃತಳ ತಂದೆ ರಾಜೇಶ್ ದೂರು ನೀಡಿದ್ದಾರೆ. ಸದ್ಯ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈಜುಕೊಳದಲ್ಲಿ ಬಿದ್ದು ಬಾಲಕಿ ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ ಬಾಲಕಿ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ತನಿಖೆಗೆ ಮನವಿ ಮಾಡಿದ್ದಾರೆ ಎಂದು ಡಿಸಿಪಿ ಶಿವಕುಮಾರ್ ತಿಳಿಸಿದ್ದಾರೆ.

ಬಾಲಕಿ ಸಾವಿಗೂ ಮುನ್ನ ಸಿಮ್ಮಿಂಗ್ ​ಪೂಲ್ ಬಳಿ ಹೋಗುವ ದೃಶ್ಯ ಅಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದುರಂತ ಸಂಭವಿಸಿದ 10 ನಿಮಿಷಗಳ ನಂತರ ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ವಿಚಾರ ಗೊತ್ತಾಗಿದೆ. 7.50 ರ ವೇಳೆಗೆ ಬಾಲಕಿಯನ್ನು ಅಪಾರ್ಟ್ಮೆಂಟ್​ ನಿವಾಸಿಗಳು‌ ಆಸ್ಪತ್ರೆಗೆ ಸಾಗಿಸಿದ್ದಾರೆ. ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.

ನೀರಿನ ಸುಳಿಯಲ್ಲಿ ಸಿಲುಕಿ ಯುವಕ ಸಾವು: ಮುರೇಗಾರ್​ ಫಾಲ್ಸ್​ಗೆ ಸ್ನಾನಕ್ಕೆಂದು ತೆರಳಿದ್ದ ಯುವಕನೊಬ್ಬ ನೀರಿನ ಸುಳಿಗೆ ಸಿಲುಕಿ ಮುಳಗಿ ಸಾವನ್ನಪ್ಪಿದ್ದ ಘಟನೆ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿ​ನಲ್ಲಿ ನಡೆದಿತ್ತು. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಇನಾಮಪುರದ ಫೈನಾನ್ಸ್​ನ ಉದ್ಯೋಗಿ ದಾನೇಶ ದೊಡ್ಮನಿ ಎನ್ನುವ 23 ವರ್ಷದ ಯುವಕ ಸಾವನ್ನಪ್ಪಿದವ. ತನ್ನ ಆರು ಮಂದಿ ಗೆಳಯರೊಂದಿಗೆ ಶಿರಸಿಯ ಮುರೇಗಾರ್​ ಫಾಲ್ಸ್​ಗೆ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಸ್ನಾನಕ್ಕೆಂದು ನೀರಿಗಿಳಿದಾಗ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕಿಯರು ಮುಳುಗಿ ಸಾವು

Last Updated : Dec 29, 2023, 7:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.