ಬೆಂಗಳೂರು: ಆನ್‌ಲೈನ್ ತರಗತಿಯಿದೆ ಎಂದು ಮನೆಯ ರೂಂನೊಳಗೆ ಸೇರಿದ್ದ 15 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಬಾಲಕಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಬೆಳಗ್ಗೆ ಆನ್‌ಲೈನ್ ತರಗತಿ ಇದೆ ಎಂದು ರೂಂನೊಳಗೆ ಕುಳಿತಿದ್ದಳು. ತಾಯಿ ಉಪಹಾರಕ್ಕೆ ಕರೆದರೂ ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ತಾಯಿ ಕಿಟಕಿಯಲ್ಲಿ ನೋಡಿದಾಗ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವುದು ಕಂಡು ಬಂದಿದೆ.
ಸ್ಥಳೀಯರು ಕೊಟ್ಟ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಾಗಿಲು ಒಡೆದು ರೂಂನೊಳಗೆ ಪ್ರವೇಶಿಸಿ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಹಿಜಾಬ್ ಧರಿಸಲು ನಿರಾಕರಣೆ: ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ