ಬೆಂಗಳೂರು : ಕ್ಷೌರಿಕರಿಗೆ ತಮ್ಮ ವೃತ್ತಿ ಪುನರಾರಂಭಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಉತ್ತಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಹಾಗೆ ಈ ವೃತ್ತಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ನಿರ್ದೇಶನ ನೀಡುವ ಮೂಲಕ ವೃತ್ತಿ ಪುನರಾರಂಭಿಸಲು ಅನುಮತಿ ನೀಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ.