ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಸೇರಿದಂತೆ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೂ ದಿನೇ ದಿನೆ ಸೋಂಕು ತಗುಲಿದವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೋಮಿಯೋಪತಿ ರೋಗನಿರೋಧಕ ನೀಡಲು ಡಾ.ಬಿ.ಟಿ ರುದ್ರೇಶ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಕೇಂದ್ರ ಸರ್ಕಾರದ ಕೇಂದ್ರೀಯ ಹೋಮಿಯೋಪತಿ ಪರಿಷತ್ತಿನ ಕಾರ್ಯಕಾರಿಣಿ ಸದಸ್ಯ ಡಾ:ಬಿ.ಟಿ .ರುದ್ರೇಶ್ ಭೇಟಿ ನೀಡಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಕೆಲಕಾಲ ಮಾತುಕತೆ ನಡೆಸಿದನ ಅವರು, ಕೊರೊನಾ ನಿಯಂತ್ರಣಕ್ಕಾಗಿ ಸಾಕಷ್ಟು ಶ್ರಮಿಸುತ್ತಿದ್ದರೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಅತಿ ಕಡಿಮೆ ವೆಚ್ಚದಲ್ಲಿ ದುಷ್ಪರಿಣಾಮಗಳಿಲ್ಲದ ಹೋಮಿಯೋಪತಿ ರೋಗ ನಿರೋಧಕಗಳನ್ನು ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.