ETV Bharat / state

ಬಿಬಿಎಂಪಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡಿ: ಅಬ್ದುಲ್ ವಾಜಿದ್ - BBMP school and college students

ಬಿಬಿಎಂಪಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಅಥವಾ ಟ್ಯಾಬ್ ನೀಡಬೇಕೆಂದು, ಬಿಬಿಎಂಪಿ ಪ್ರತಿ ಪಕ್ಷದ ನಾಯಕ ಅಬ್ದುಲ್ ವಾಜಿದ್ ಬಿಬಿಎಂಪಿ ಮೇಯರ್​ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಬಿಬಿಎಂಪಿ ಪ್ರತಿ ಪಕ್ಷದ ನಾಯಕ ಅಬ್ದುಲ್ ವಾಜಿದ್
ಬಿಬಿಎಂಪಿ ಪ್ರತಿ ಪಕ್ಷದ ನಾಯಕ ಅಬ್ದುಲ್ ವಾಜಿದ್ಬಿಬಿಎಂಪಿ ಪ್ರತಿ ಪಕ್ಷದ ನಾಯಕ ಅಬ್ದುಲ್ ವಾಜಿದ್
author img

By

Published : Jul 14, 2020, 1:38 AM IST

ಬೆಂಗಳೂರು: ಕೊರೊನಾ ಸೋಂಕಿನಿಂದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹಿನ್ನಡೆ ಆಗ್ತಿದೆ. ಆದ್ದರಿಂದ ಕೂಡಲೇ ಬಿಬಿಎಂಪಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣಕ್ಕೆ ಅನುಕೂಲವಾಗುವಂತೆ ಲ್ಯಾಪ್ ಟಾಪ್ ಅಥವಾ ಟ್ಯಾಬ್ ನೀಡಬೇಕೆಂದು ಬಿಬಿಎಂಪಿ ಪ್ರತಿ ಪಕ್ಷದ ನಾಯಕ ಅಬ್ದುಲ್ ವಾಜಿದ್ ಮನವಿ ಮಾಡಿದ್ದಾರೆ.

ಪತ್ರಿಕಾ ಪ್ರಕಟಣೆ
ಪತ್ರಿಕಾ ಪ್ರಕಟಣೆ

ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಅಲ್ಲದೇ ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ಆನ್‍ಲೈನ್ ಶಿಕ್ಷಣ ಪ್ರಾರಂಭಿಸಲಾಗಿದೆ‌. ಆದರೆ ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ.

ಹೀಗಾಗಿ, ಪಾಲಿಕೆ ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣ ನೀಡುವ ನಿಟ್ಟಿನಲ್ಲಿ ಐದನೇ ತರಗತಿಯಿಂದ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮ ಹಾಗೂ ವಿಶೇಷ ಅನುದಾನದಡಿ ಲ್ಯಾಪ್‍ಟಾಪ್ ಅಥವಾ ಟ್ಯಾಬ್‍ಗಳನ್ನು ಉಚಿತವಾಗಿ ನೀಡುವಂತೆ ಪ್ರತಿಪಕ್ಷದ ನಾಯಕ ಅಬ್ದುಲ್ ವಾಜಿದ್ ಬಿಬಿಎಂಪಿ ಮೇಯರ್, ಆಯುಕ್ತರು ಹಾಗೂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.