ಬೆಂಗಳೂರು: ವಿಧಾನ ಪರಿಷತ್ನಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದರು.
ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದಾಗಲೂ ಗೋಪೂಜೆ ನೆರವೇರಿಸಿದ್ದ ಸಿಎಂ ಯಡಿಯೂರಪ್ಪ, ವಿಧಾನ ಪರಿಷತ್ನಲ್ಲಿ ಅಂಗೀಕಾರವಾಗುತ್ತಿದ್ದಂತೆ ಮತ್ತೊಮ್ಮೆ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಉಪಸ್ಥಿತರಿದ್ದರು.
ವಿಧಾನ ಪರಿಷತ್ನಲ್ಲಿ ಅಂಗೀಕಾರಕ್ಕೆ ಬಾಕಿ ಇದ್ದ ಗೋ ಹತ್ಯೆ ನಿಷೇಧ ಕಾಯ್ದೆ ಸೋಮವಾರ ಮಂಡನೆಯಾಗಿ ಅಂಗೀಕಾರವಾಗುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯರನ್ನು ನಿವಾಸಕ್ಕೆ ಕರೆಸಿಕೊಂಡ ಸಿಎಂ ಎಂಎಲ್ಸಿಗಳಿಗೆ ಅಭಿನಂದನೆ ಸಲ್ಲಿಸಿದ್ದರು.