ಬೆಂಗಳೂರು: ರಾಜ್ಯ ಸರ್ಕಾರ ವಿವಿಧ ವರ್ಗದ ಕಾರ್ಮಿಕರನ್ನು ಗುರುತಿಸಿ ಆರ್ಥಿಕ ಪ್ಯಾಕೇಜ್ ಪ್ರಕಟಿಸಿದೆ. ಆದರೆ, ಚಿನ್ನ-ಬೆಳ್ಳಿ ಕೆಲಸ ಮಾಡುವ ಕಾರ್ಮಿಕ ವರ್ಗದವರನ್ನು ಮರೆತಿದೆ ಎಂದು ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಟಿ.ಎ. ಶರವಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕುಟುಂಬ ಚಿನ್ನ-ಬೆಳ್ಳಿ ಕೆಲಸವನ್ನು ಮಾಡಿ ಜೀವನ ಸಾಗಿಸುತ್ತಿದ್ದಾರೆ. ಲಾಕ್ಡೌನ್ ಹಿನ್ನೆಲೆ ಕೆಲಸ ಇಲ್ಲದೆ ಚಿನ್ನ-ಬೆಳ್ಳಿ ಕಾರ್ಮಿಕರು ಕಂಗಾಲಾಗಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಹಾಗಾಗಿ, ರಾಜ್ಯ ಸರ್ಕಾರ ಈ ಕೂಡಲೇ ಚಿನ್ನ-ಬೆಳ್ಳಿ ಕೆಲಸ ಮಾಡುವ ಕಾರ್ಮಿಕರಿಗೆ ಆರ್ಥಿಕ ಸಹಾಯ ಮಾಡಬೇಕೆಂದು ಟಿ.ಎ. ಶರವಣ ಆಗ್ರಹಿಸಿದ್ದಾರೆ.