ದೇವನಹಳ್ಳಿ : ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡಲು ಯತ್ನಿಸಿದ ಇಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 90 ಲಕ್ಷ ಮೌಲ್ಯದ ಒಟ್ಟು 1.7 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಥಾಯ್ಲೆಂಡ್ ದೇಶದ ಫುಕೆಟ್ ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 28 ವರ್ಷದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಆತ ಧರಿಸಿದ ಬಟ್ಟೆಯೊಳಗೆ ಚಿನ್ನದ 18 ಬಿಸ್ಕತ್ ಗಳು ಪತ್ತೆಯಾಗಿದೆ. ಬಟ್ಟೆಯೊಳಗೆ ಮರೆಮಾಚಿ ಚಿನ್ನವನ್ನಿಟ್ಟು ನಂತರ ಹೊಲಿಗೆ ಹಾಕಿ ಚಿನ್ನದ ಅಕ್ರಮ ಚಿನ್ನ ಸಾಗಣೆಗೆ ಮುಂದಾಗಿದ್ಧ. ಬಂಧಿತ ಆರೋಪಿಯಿಂದ 63 ಲಕ್ಷ ಮೌಲ್ಯದ 1.199 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಬಹ್ರೈನ್ ದೇಶದ ಮನಮದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ವ್ಯಕ್ತಿಯ ಅನುಮಾನಾಸ್ಪದ ನಡಿಗೆಯಿಂದ ಸಂಶಯಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದಾಗ ವಿಲಕ್ಷಣವಾದ ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯಿಂದ 27 ಲಕ್ಷ ಮೌಲ್ಯದ 519 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ : ತಿರುಪತಿಗೆ ತೆರಳುತ್ತಿದ್ದ ಕಾನ್ಸ್ಟೇಬಲ್ ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ದೃಶ್ಯ ಸೆರೆ