ETV Bharat / state

ಶಾಲಾ-ಕಾಲೇಜುಗಳಲ್ಲಿ ಹಾಜರಾತಿ ಉತ್ತಮವಾಗಿದೆ: ಸಚಿವ ಸುರೇಶ್ ಕುಮಾರ್

6ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಇಂದು 4,71,823 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪ್ರಸ್ತುತ ವರ್ಷದ ಶಾಲಾರಂಭದ ನಾಲ್ಕನೇ ದಿನವಾದ ಸೋಮವಾರ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದು ಶಾಲಾ-ಕಾಲೇಜುಗಳನ್ನು ಆರಂಭಿಸಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್
author img

By

Published : Jan 4, 2021, 7:30 PM IST

ಬೆಂಗಳೂರು: ರಾಜ್ಯದಲ್ಲಿರುವ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 3,62,704 ವಿದ್ಯಾರ್ಥಿಗಳ ಪೈಕಿ ಸೋಮವಾರ 1,99,553 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 55.018 ಹಾಜರಿ) ಅಂತೆಯೇ 16,850 ಪ್ರೌಢ ಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,81,728 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 51.95 ಹಾಜರಾತಿ) ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಾಜರಾತಿ ದಾಖಲಾತಿ
ಹಾಜರಾತಿ ದಾಖಲಾತಿ

6ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಇಂದು 4,71,823 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪ್ರಸ್ತುತ ವರ್ಷದ ಶಾಲಾರಂಭದ ನಾಲ್ಕನೇ ದಿನವಾದ ಸೋಮವಾರ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದು ಶಾಲಾ-ಕಾಲೇಜುಗಳನ್ನು ಆರಂಭಿಸಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಕರಿಗೆ ತಗುಲಿದ ಕೊರೊನಾ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕ ಕುರುವತ್ತಿ ಸರ್ಕಾರಿ ಪ್ರೌಢ ಶಾಲೆ ಮತ್ತು ಒಂದು ಖಾಸಗಿ ಶಾಲೆಯ ಒಬ್ಬೊಬ್ಬ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯ ಒಬ್ಬ ಶಿಕ್ಷಕರು ಮತ್ತು ಕಳಸಾ ತಾಲೂಕಿನ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢಪಟ್ಟಿದ್ದು, ಈ ಶಾಲೆಗಳನ್ನು ಮುಂದಿನ ಸೋಮವಾರ ಆರಂಭಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಓದಿ:ಜ. 4ರಿಂದ ಸಂವೇದಾ ಪಾಠಗಳ ಮರು ಪ್ರಸಾರ: ಸಚಿವ ಸುರೇಶ್ ಕುಮಾರ್

ವಿದ್ಯಾಗಮ ತರಗತಿಗಳೂ ಸಹ ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಹೆಚ್ಚಿನ ಮಕ್ಕಳು ಹಾಜರಾಗುತ್ತಿದ್ದಾರೆ. ಪೋಷಕರು ಮತ್ತು ಮಕ್ಕಳು ಶಾಲಾರಂಭದ ಕುರಿತು ಸಂತಸ ವ್ಯಕ್ತಪಡಿಸಿದ್ದಾರಲ್ಲದೆ, ಸುರಕ್ಷತೆ ಮತ್ತು ಎಸ್‍ಒಪಿ ಪಾಲನೆ ಕುರಿತು ವಿಶ್ವಾಸ ಹೊಂದಿದ್ದಾರೆ. ಬಹುದಿನಗಳ ಕಾಲ ಶಾಲೆಗಳು ಆರಂಭವಾಗದೇ ಮಕ್ಕಳ ಭವಿಷ್ಯದ ಕುರಿತು ಆತಂಕದಲ್ಲಿದ್ದ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದೆಲ್ಲೆಡೆ ಶಾಲಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.