ETV Bharat / state

'ಎಂಜಿನಿಯರಿಂಗ್‌, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಲು ಸರ್ಕಾರ ಸಿದ್ಧ'

author img

By

Published : Dec 25, 2020, 2:15 PM IST

ನಮ್ಮ ಎಲ್ಲ ಸವಾಲು ಮತ್ತು ಸಮಸ್ಯೆಗಳಿಗೆ ಖಚಿತವಾದ ಪರಿಹಾರ ಸಿಗುವುದು ಶಿಕ್ಷಣದಿಂದಲೇ. ಹೀಗಾಗಿ ಎಲ್ಲವನ್ನೂ ಸರ್ಕಾರವೇ ತನ್ನ ವಶದಲ್ಲಿಟ್ಟುಕೊಂಡು ಮಾಡಲು ಸಾಧ್ಯವಿಲ್ಲ. ಅಟಲ್‌ ಬಿಹಾರಿ ವಾಜಪೇಯಿ ಅವರ ದೂರದೃಷ್ಟಿ, ಆಶಯ ಮತ್ತು ಆಡಳಿತದಂತೆಯೇ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ್ ಹೇಳಿದ್ರು.

good governance day celebration in bengaluru
ಉತ್ತಮ ಆಡಳಿತ ದಿನ ಆಚರಣೆ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಗೆ ತೆರೆದುಕೊಳ್ಳುವ ಉದ್ದೇಶದಿಂದ ಖಾಸಗಿ ಹಾಗೂ ಸಾರ್ವಜನಿಕ ಸ್ವಾಮ್ಯದ ಎಂಜಿನಿಯರಿಂಗ್‌, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಐಟಿ,ಬಿಟಿ, ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಉತ್ತಮ ಆಡಳಿತ ದಿನ ಆಚರಣೆ

ಮಾಜಿ ಪ್ರಧಾನಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಇಂದು ಏರ್ಪಡಿಸಲಾಗಿದ್ದ ʼಉತ್ತಮ ಆಡಳಿತ ದಿನʼ (ಗುಡ್‌ ಗವರ್ನೆನ್ಸ್‌ ಡೇ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ರು.

ಸಮಾಜದ ಎಲ್ಲ ಸವಾಲುಗಳನ್ನು ಎದುರಿಸಲು ಹಾಗೂ ವೈಯಕ್ತಿಕವಾಗಿಯೂ ಯಾವುದೇ ಸಮಸ್ಯೆಯನ್ನು ಮೆಟ್ಟಿ ನಿಲ್ಲಲು ಶಿಕ್ಷಣವೇ ಏಕೈಕ ರಾಜಮಾರ್ಗ. ಈ ಹಿನ್ನೆಲೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಜಾಗತಿಕ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ, ರಚನಾತ್ಮಕ ಸ್ವಾಯತ್ತತೆ ನೀಡಿ ಅತ್ಯುತ್ತಮ ಫಲಿತಾಂಶವನ್ನು ಪಡೆಯಲಾಗುತ್ತಿದೆ. ಇದೇ ದಾರಿಯಲ್ಲಿ ನಮ್ಮ ಸರಕಾರವೂ ಹೆಜ್ಜೆ ಇಡಲಿದೆ. ಎಲ್ಲವನ್ನೂ ಸರ್ಕಾರವೇ ತನ್ನ ವಶದಲ್ಲಿಟ್ಟುಕೊಂಡು ಮಾಡಲು ಸಾಧ್ಯವಿಲ್ಲ. ಅಟಲ್‌ ಬಿಹಾರಿ ವಾಜಪೇಯಿ ಅವರ ದೂರದೃಷ್ಟಿ, ಆಶಯ ಮತ್ತು ಆಡಳಿತದಂತೆಯೇ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು ಎಂದ್ರು.

ಉನ್ನತ ಶಿಕ್ಷಣದಲ್ಲಿ ವಿವಿಧ ಬಗೆಯ ಸಂಸ್ಥೆಗಳಿಗೆ ಸ್ವಾಯತ್ತತೆ ಎಂಬ ಶಕ್ತಿಯನ್ನು ತುಂಬಲು ಸರಕಾರ ಸಿದ್ಧವಿದೆ. ಈ ಹಿನ್ನೆಲೆ ಅಟಲ್‌ ಜೀ ಅವರು ನಮಗೆ ಸ್ಫೂರ್ತಿ ಎಂದರು. ನೂತನವಾಗಿ ಜಾರಿಗೆ ತರಲಾಗುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಸ್ವಾಯತ್ತತೆ ಅಂಶವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗಿದೆ ಎಂದ್ರು.

ಶಿಕ್ಷಣ ಮತ್ತು ಕೌಶಲ್ಯ :

ನಮ್ಮ ಎಲ್ಲ ಸವಾಲು ಮತ್ತು ಸಮಸ್ಯೆಗಳಿಗೆ ಖಚಿತವಾದ ಪರಿಹಾರ ಸಿಗುವುದು ಶಿಕ್ಷಣದಿಂದಲೇ ಎಂಬುದು ನನ್ನ ಅಚಲ ನಂಬಿಕೆ. ಹೀಗಾಗಿ ಉತ್ತಮ ಶಿಕ್ಷಣ ಹಾಗೂ ಸತ್ವಭರಿತ ಕುಶಲತೆಯನ್ನು ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಕೊಡುವ ಮೂಲಕ ನಾವು ಸ್ಪಷ್ಟವಾದ ಫಲಿತಾಂಶಗಳನ್ನು ಸಾಧಿಸಬಹುದು ಎಂದು ಡಿಸಿಎಂ ಪ್ರತಿಪಾದಿಸಿದರು.

ಭಾರತವೂ ಸೇರಿದಂತೆ ಕರ್ನಾಟಕದಲ್ಲೂ ಉದ್ಯೋಗ ಮಾರುಕಟ್ಟೆ ಬೃಹತ್​ ಆಗಿದೆ. ಆದರೆ, ಆ ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಉತ್ತಮ, ಕುಶಲತೆಯುಳ್ಳ ಮಾನವ ಸಂಪನ್ಮೂಲವನ್ನು ಒದಗಿಸಲು ನಾವು ವಿಫಲರಾಗಿದ್ದೇವೆ. ಸರ್ಕಾರ ಇದಕ್ಕೆ ಪರಿಹಾರ ಕಂಡುಕೊಂಡಿದ್ದು, ನಮ್ಮ ಯುವಜನರಿಗೆ ಯಾವ ರೀತಿಯ ಕುಶಲತೆ ಬೇಕು ಹಾಗೂ ಜಾಬ್‌ ಮಾರುಕಟ್ಟೆಗೆ ಅವರನ್ನು ಹೇಗೆ ಅಣಿಗೊಳಿಸಬೇಕು ಎಂಬುದನ್ನು ಮನಗಂಡು ಆ ದಿಕ್ಕಿನಲ್ಲಿ ಸಾಗಿದೆ ಎಂದು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌ ಅವರು, ಉನ್ನತ ಶಿಕ್ಷಣ-ಕಾಲೇಜು ಶಿಕ್ಷಣ ಇಲಾಖೆಯ ಯಶಸ್ವಿ ಸಾಧನೆಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರಲ್ಲದೆ, ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ, ವಿಶ್ವವಿದ್ಯಾಲಯಗಳಲ್ಲಿ ಸುಧಾರಣೆಗಳು, ಆನ್‌ಲೈನ್‌ ಅಪ್ಲಿಕೇಶನ್‌, ಏಕೀಕೃತ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿರ್ವಹಣಾ ವ್ಯವಸ್ಥೆ, ರಾಷ್ಟ್ರೀಯ ಶಿಕ್ಷಣ ನೀತಿ ಮತ್ತಿತರ ಅಂಶಗಳ ಬಗ್ಗೆ ಮಾಹಿತಿ ನೀಡಿದರು. ಜತೆಗೆ, ಕೌಶಲ್ಯಾಭಿವೃದ್ಧಿ ಮತ್ತು ಗ್ರಾಮೀಣ-ನಗರ ಉದ್ಯಮಶೀಲತೆ-ಜೀವನೋಪಾಯ ಇಲಾಖೆ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳ ಸಾಧನೆಗಳ ಬಗ್ಗೆ ಸಂಬಂಧಿತ ಹಿರಿಯ ಅಧಿಕಾರಿಗಳು ಇದೇ ವೇಳೆ ಪ್ರಾತ್ಯಕ್ಷಿಕೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.