ETV Bharat / state

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಬಜೆಟ್​​ನಲ್ಲೇ ಗೌರವ ಧನ ಹೆಚ್ಚಳ ಘೋಷಣೆ ಸಾಧ್ಯತೆ

author img

By

Published : Feb 14, 2023, 8:12 PM IST

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Good news for Asha workers
Good news for Asha workers

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಾ.ಕೆ.ಸುಧಾಕರ್, ಸಂಘದ ಮನವಿ ಸ್ವೀಕರಿಸಿ ಮಾತನಾಡಿದರು.

Good news for Asha workers
ಸಚಿವ ಡಾ. ಕೆ ಸುಧಾಕರ್‌

ನಾನು ಆರೋಗ್ಯ ಸಚಿವನಾದ ಬಳಿಕ ಪ್ರತಿ ವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಿಸಲು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ತಮ್ಮ ಮೊದಲ ಬಜೆಟ್‌ನಲ್ಲಿ ಗೌರವಧನವನ್ನು 1,000 ರೂ. ಹೆಚ್ಚಿಸಿದ್ದಾರೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರ ಕೆಲ ಮನವಿಗಳನ್ನು ನೀಡಿದ್ದು, ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು ಎಂದರು.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆ:10 ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದ ಸರ್ಕಾರ

ಆಶಾ ಕಾರ್ಯಕರ್ತೆಯರ ಪ್ರತಿನಿಧಿಯಾಗಿ ನಾನು ಕೆಲಸ ಮಾಡುತ್ತೇನೆ. ಇತ್ತೀಚೆಗೆ ಬಜೆಟ್‌ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಯಿತು. ಈ ಚರ್ಚೆಯ ವೇಳೆ, ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು 2,000 ರೂ. ಹೆಚ್ಚಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು. ಆಶಾ ಕಾರ್ಯಕರ್ತೆಯರಿಗೆ 5 ಕೋಟಿ ರೂ. ಮೊತ್ತದ ಕ್ಷೇಮಾಭಿವೃದ್ಧಿ ನಿಧಿ ಇರಿಸಿ, ಕಾರ್ಯಕರ್ತೆಯರ ಆರೋಗ್ಯ ರಕ್ಷಣೆಗೆ ನೀಡಬೇಕು ಎಂಬ ಬೇಡಿಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ತಾಂತ್ರಿಕ ನ್ಯೂನತೆ ನಿವಾರಿಸಿ, ಸರಿಯಾದ ಸಮಯಕ್ಕೆ ಗೌರವಧನ ನೀಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

Good news for Asha workers
ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶ

ಕೋವಿಡ್‌ ಸಮಯದಲ್ಲಿ ಅನೇಕರು ವರ್ಕ್‌ ಫ್ರಂ ಹೋಮ್‌ ಮಾಡಿದ್ದಾರೆ. ಆದರೆ, ಆಶಾ ಕಾರ್ಯಕರ್ತೆಯರು ವರ್ಕ್‌ ಫ್ರಂ ಸ್ಟ್ರೀಟ್‌ ಮಾಡಿದ್ದರು. 10 ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಅಥವಾ 60 ವಯಸ್ಸಿನ ಬಳಿಕ ನಿವೃತ್ತರಾಗಲು ಬಯಸಿದರೆ, ಅವರಿಗೆ ಇಡಿಗಂಟು ನೀಡಲು ಕ್ರಮ ವಹಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಚರ್ಚಿಸಲಾಗುವುದು. ಕೇವಲ ಮಾತಿನಲ್ಲಲ್ಲ, ಕೃತಿಯ ಮೂಲಕ ಕೊಡುಗೆ ನೀಡಲಾಗುವುದು ಎಂದರು.

Good news for Asha workers
ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶ

ಇದನ್ನೂ ಓದಿ: ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಒಂದೂವರೆ ವರ್ಷದ ಬಾಲಕಿ ಸಾವು.. ಪೋಷಕರ ಆಕ್ರಂದನ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವವಾದದ್ದು. ಅಪೌಷ್ಟಿಕತೆ ನಿವಾರಿಸುವ ಪೋಷಣ್‌ ಅಭಿಯಾನ, ಇಂದ್ರಧನುಷ್‌ ಲಸಿಕಾಕರಣ ಮೊದಲಾದ ಕಾರ್ಯಕ್ರಮಗಳನ್ನು ಆಶಾ ಕಾರ್ಯಕರ್ತೆಯರಿಂದ ಯಶಸ್ವಿಯಾಗುತ್ತಿದೆ. ಕೋವಿಡ್‌ ಲಸಿಕಾಕರಣದಲ್ಲಿ, 42 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಲಸಿಕೆ ನೀಡಲು ಶ್ರಮಿಸಿದ್ದರು. ಕೋವಿಡ್‌ ಲಸಿಕೆ ಅಭಿಯಾನದಲ್ಲಿ ಮೊದಲ ಮತ್ತು ಎರಡನೇ ಡೋಸ್‌ ಶೇ.100 ರಷ್ಟು ಆಗಿದ್ದು, ಇದರಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರವೇ ಪ್ರಮುಖವಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.