ಬೆಂಗಳೂರು: ಲಾಕ್ಡೌನ್ ನಿಂದಾಗಿ ತತ್ತರಿಸಿ ಹೋಗಿದ್ದ ಆಟೋ-ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ 5000 ಸಹಾಯ ಧನವನ್ನು ಆರ್ಟಿಓ ನಾಳೆಯಿಂದ ಅವರ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಿದೆ.
ಕೊರೊನಾದಿಂದ ಸಂಕಷ್ಟ ಅನುಭವಿಸುತ್ತಿದ್ದ ಆಟೋ ಟ್ಯಾಕ್ಸಿ ಚಾಲಕರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದಾಗಿ, ಚಾಲಕರ ಖಾತೆಗೆ 5000 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿತ್ತು. ಘೋಷಣೆಯಾಗಿ ಒಂದು ವಾರ ಕಳೆದರೂ ಹಣ ಕೈ ಸೇರುವ ನಿರೀಕ್ಷೆ ಹುಸಿಯಾಗಿತ್ತು. ಅದರಿಂದಾಗಿ ಸಾರಿಗೆ ಇಲಾಖೆ ಮುಂದೆ ಚಾಲಕರು ಪ್ರತಿಭಟನೆ ನಡೆಸಿದ್ದರು.
ಆದರೀಗ ಆಟೋ-ಟ್ಯಾಕ್ಸಿ ಚಾಲಕರಿಗೆ ಆರ್ಟಿಓ ಗುಡ್ ನ್ಯೂಸ್ ನೀಡಿದೆ. ನಾಳೆಯೇ ಚಾಲಕರ ಖಾತೆಗೆ ನೆರವಿನ ಹಣವನ್ನು ಹಂತ ಹಂತವಾಗಿ ಎರಡು ದಿನದಲ್ಲಿ ಎಲ್ಲಾ ಚಾಲಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಿದೆ.
![ಆತ್ಮಹತ್ಯೆ](https://etvbharatimages.akamaized.net/etvbharat/prod-images/11:41_kn-bng-3-rto-amount-driver-script-7201801_31052020114027_3105f_00467_720.jpg)
ಈಗಾಗಲೇ 1.77 ಲಕ್ಷ ಆಟೋ ಮತ್ತು ಟ್ಯಾಕ್ಸಿ ಚಾಲಕರಿಂದ ಅರ್ಜಿ ಬಂದಿವೆ. ನಾಳೆ ಸುಮಾರು 40 ಸಾವಿರ ಚಾಲಕರಿಗೆ ಹಣ ಜಮಾ ಮಾಡಲಾಗುತ್ತಿದ್ದು, ಸರ್ಕಾರದಿಂದ 20 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರ ಖಾತೆಗೆ ಈ ಸಹಾಯಧನ ಹಣ ಕೈಸೇರಲಿದೆ.