ETV Bharat / state

ಬಿಪಿಎಲ್ ಕಾರ್ಡ್​ದಾರರಿಗೆ ಗುಡ್ ನ್ಯೂಸ್ : ಇಂದಿನಿಂದ ಹೆಸರು ಸೇರ್ಪಡೆ, ಪರಿಷ್ಕರಣೆಗೆ ಅವಕಾಶ

author img

By ETV Bharat Karnataka Team

Published : Oct 5, 2023, 5:19 PM IST

ಇಂದಿನಿಂದ ಮೂರು ದಿನಗಳ ಕಾಲ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅವಕಾಶ ನೀಡಿದೆ.

ಬಿಪಿಎಲ್ ಕಾರ್ಡ್
ಬಿಪಿಎಲ್ ಕಾರ್ಡ್

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆ ಮಾಡಬಹುದಾಗಿದೆ. ಆದರೆ, ಹೊಸ ಕಾರ್ಡ್ ಪಡೆಯಲು ಮತ್ತಷ್ಟು ಕಾಯಬೇಕಿದೆ.

ರಾಜ್ಯದಲ್ಲಿ ಮತ್ತೊಮ್ಮೆ ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಕಾರ್ಡ್​ಗಳಿಗೆ ಹೊಸ
ಹೆಸರು ಸೇರ್ಪಡೆ, ಹೆಸರುಗಳ ಅಕ್ಷರಗಳು, ವಿಳಾಸ ಪರಿಷ್ಕರಣೆ ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳಿದ್ದರೂ ಮಾಡಿಸಿಕೊಳ್ಳಬಹುದಾಗಿದೆ. ಹಾಲಿ ಇರುವ ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದಕ್ಕೆ ಅವಕಾಶ ಒದಗಿಸಲಾಗಿದೆ.

ಇಂದಿನಿಂದ ಅಕ್ಟೋಬರ್ 7 ರವರೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಮೊದಲ ಹಂತ ಮುಗಿಯುತ್ತಿದ್ದಂತೆ ಎರಡನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಹಾವೇರಿ, ಕೊಡಗು, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಅವಕಾಶ ನೀಡಲಾಗುತ್ತದೆ. ನಂತರ ಉಳಿದ ಜಿಲ್ಲೆಗಳಲ್ಲಿಯೂ ಮೂರನೇ ಹಂತದಲ್ಲಿ ಹೆಸರುಗಳ ಪರಿಷ್ಕರಣೆ ಮಾಡಬಹುದಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆದರೆ ಇದು ಕೇವಲ ಪರಿಷ್ಕರಣೆ ಮಾಡಲು ಮಾತ್ರ ಸೀಮಿತವಾಗಿದ್ದು, ಈಗಾಗಲೇ ಹೊಸದಾದ ಬಿಪಿಎಲ್ ಕಾರ್ಡ್ ಕೋರಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ ಮತ್ತು ಹೊಸ ಅರ್ಜಿಗಳ ಸಲ್ಲಿಕೆಗೆ ಸಂಬಂಧಿಸಿದ್ದಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ. ಹಾಗಾಗಿ, ಹಾಲಿ ಇರುವ ಕಾರ್ಡುಗಳ ಪರಿಷ್ಕರಣೆ ಮಾತ್ರ ಮಾಡಿಕೊಳ್ಳಬಹುದಾಗಿದೆ.

ಇಂದಿನಿಂದ ಅವಕಾಶ: ಬಿಪಿಎಲ್ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟು ಸೆ.1ರಿಂದ ಸೆ.10ರ ವರೆಗೆ ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಲು ಸೂಚಿಸಿತ್ತು. ಆದರೆ, ಪರಿಷ್ಕರಣೆಗೆ ಬೇಡಿಕೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಮತ್ತೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಹೊಸ ಕಾರ್ಡ್ ವಿಳಂಬ : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿ ಶೇ.76.04, ನಗರ ಪ್ರದೇಶಗಳಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಫಲಾನುಭವಿಗಳಿಗೆ 1,03,70,669 ಬಿಪಿಎಲ್ ಕಾರ್ಡ್ ನೀಡಲು ಅವಕಾಶವಿದೆ. ಆದರೆ ಪ್ರಸ್ತುತ ಈಗಾಗಲೇ ರಾಜ್ಯದಲ್ಲಿ 3,92,54,052 ಫಲಾನುಭವಿಗಳಿಗೆ 1,16,98,551 ಬಿಪಿಎಲ್ ಕಾರ್ಡ್​ಗಳನ್ನು ನೀಡಲಾಗಿದೆ. ರಾಜ್ಯ ನೀಡಬಹುದಾದ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ 13,27,882 ಬಿಪಿಎಲ್ ಕಾರ್ಡ್ ನೀಡಲಾಗಿದೆ. ಹಾಗಾಗಿ ಸದ್ಯ ಹೊಸ ಕಾರ್ಡ್​ಗಳ ವಿತರಣೆ ವಿಳಂಬವಾಗಲಿದೆ.

ಇದನ್ನೂ ಓದಿ : Annabhagya: ಬಿಪಿಎಲ್ ಕಾರ್ಡ್‌ದಾರರ ಆಧಾರ್ ಲಿಂಕ್ ಕಡ್ಡಾಯ: ಅನ್ನಭಾಗ್ಯದ ಹಣ ಪಡೆಯುವುದು ಹೇಗೆ ಗೊತ್ತೇ? ಇಲ್ಲಿದೆ ಮಾಹಿತಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.