ಬೆಂಗಳೂರು: ಇದೇ ಫೆಬ್ರವರಿ ತಿಂಗಳ ಅಂತ್ಯದ ವೇಳೆಗೆ ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ 94 ಸಿಸಿಯಡಿ ಮನೆ ಬಾಗಿಲಿಗೆ ಹಕ್ಕು ಪತ್ರ ತಲುಪಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಿಹಿ ಸುದ್ದಿ ನೀಡಿದ್ದಾರೆ.
ಇದನ್ನೂ ಓದಿ: ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಯಶವಂತಪುರ ವಿಧಾನಸಭಾ ಕ್ಷೇತ್ರದ ರಾಮೋಹಳ್ಳಿ ಗ್ರಾಮ ಪಂಚಾಯತ್ ನಲ್ಲಿ 94ಸಿಸಿಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿd ಬಳಿಕ ಮಾತನಾಡಿದ ಅವರು, ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಹಕ್ಕು ಪತ್ರ ತಲುಪಿಸಲಾಗುವುದು. ಮನೆ ಇಲ್ಲದವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ. 14 ಸಾವಿರ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಜಿ.ಪಂ, ತಾ.ಪಂ.ನಲ್ಲಿ 7 ಸಾವಿರ ಮನೆಗಳು ನಿರ್ಮಾಣವಾಗಲಿವೆ. ಈ ಭಾಗದಲ್ಲಿ 400 ಜನ ಅರ್ಜಿ ಸಲ್ಲಿಸಿದ್ದು, ಪ್ರತಿಯೊಬ್ಬರಿಗೂ ಮನೆ ಸಿಗಲಿದೆ ಎಂದು ಹೇಳಿದರು.
ಹಕ್ಕು ಪತ್ರದ ಜೊತೆಗೆ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ಕೆಲಸ ಕೂಡ ಮಾಡಲಾಗುತ್ತಿದೆ. ವಿಕಲಚೇತನರಿಗೆ ನಿವೇಶನ ಹಂಚಿಕೆ ಮಾಡಲು ಚಲಘಟ್ಟ ಗ್ರಾಮದಲ್ಲಿ 5 ಎಕರೆ ಜಾಗ ನೀಡಲಾಗಿದೆ. ಈ ಭಾಗದಲ್ಲಿ ಒಂದು ಎಕರೆ ಜಾಗ ಸಿಕ್ಕರೆ ಆಸ್ಪತ್ರೆ ನಿರ್ಮಾಣಕ್ಕೂ ಚಾಲನೆ ನೀಡಬಹುದು. ಸರ್ಕಾರಿ ಜಾಗ ಗುರುತಿಸುವಂತೆ ಸಚಿವರು ತಿಳಿಸಿದರು.
ಇದೇ ವೇಳೆ ರಾಮೋಹಳ್ಳಿ ರಂಗಮಂದಿರ ಬಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಸೋಮಶೇಖರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ದೀಪ ಅಳವಡಿಸುವ ವಾಹನ ಹಾಗೂ ಕಸದ ವಾಹನಗಳಿಗೆ ಚಾಲನೆ ನೀಡಿದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ