ETV Bharat / state

ಉತ್ತರ ಒಳನಾಡಿನಲ್ಲಿ ನಾಳೆ ಉತ್ತಮ ಮಳೆ ನಿರೀಕ್ಷೆ... ಯಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಕೊಟ್ಟಿಗೆಹಾರ 7 ಸೆಂ.ಮೀ, ಕೋಟಾ ಹಾಗೂ ಹೊನ್ನಾವರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ. ಎಸ್. ಪಾಟೀಲ್ ತಿಳಿಸಿದರು.

Good rain is expected in the north inland... yellow Alert for tomorrow
ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷೆ... ನಾಳೆ ಎಲ್ಲೋ ಅಲರ್ಟ್ ಘೋಷಣೆ
author img

By

Published : Sep 24, 2020, 10:48 PM IST

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಕೊಟ್ಟಿಗೆಹಾರ 7 ಸೆಂ.ಮೀ, ಕೋಟಾ ಹಾಗೂ ಹೊನ್ನಾವರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ.ಎಸ್.ಪಾಟೀಲ್ ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿ ಸೆ.24 ಹಾಗೂ 25 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸೆ.26 ರಿಂದ 28 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷೆ... ನಾಳೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಉತ್ತರ ಒಳನಾಡಿನಲ್ಲಿ ಸೆ.25 ರಿಂದ 26 ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 27-28 ರಂದು ಹಲವು ಕಡೆ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 25 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಸಿ. ಎಸ್. ಪಾಟೀಲ್ ತಿಳಿಸಿದರು.

ದಕ್ಷಿಣ ಒಳನಾಡಿನಲ್ಲಿ ಸೆ. 25 ರಿಂದು 26 ರವರೆಗೆ ಹಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೆ. 24, 27, 28 ಕೆಲವು ಕಡೆ ಮಾತ್ರ ಮಳೆಯಾಗಬಹುದು. ಬೆಂಗಳೂರಿನಲ್ಲೂ ಕೆಲವು ಕಡೆ ಸಾಧಾರಣ ಮಳೆಯಾಗಬಹುದು ಎಂದು ಸಿ. ಎಸ್. ಪಾಟೀಲ್ ತಿಳಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.