ETV Bharat / state

ಬೆಂಗಳೂರು ತಂತ್ರಜ್ಞಾನ​ ಶೃಂಗಸಭೆಗೆ ನಿರೀಕ್ಷೆ ಮೀರಿ ಸ್ಪಂದನೆ

‘ಬೆಂಗಳೂರು ಟೆಕ್​ ಶೃಂಗಸಭೆಗೆ ಮೊದಲ ದಿನ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ.

good-response-for-bengaluru-tech-summit
ಬೆಂಗಳೂರು ತಂತ್ರಜ್ಞಾನ​ ಶೃಂಗಸಭೆ
author img

By

Published : Nov 20, 2020, 3:59 AM IST

ಬೆಂಗಳೂರು: ಮೊದಲ ಸಲ ವರ್ಚುವಲ್ ಆಗಿ ನಡೆದ ‘ಬೆಂಗಳೂರು ಟೆಕ್​ ಶೃಂಗಸಭೆ'ಗೆ ಮೊದಲ ದಿನವಾದ ಗುರುವಾರ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ.

ಬಿಟಿಎಸ್-2020 ಆನ್​ಲೈನ್ ವೇದಿಕೆಯೊಂದರಲ್ಲೇ 7,000 ವ್ಯಾಪಾರೋದ್ಯಮಿಗಳು ನೋಂದಣಿ ಮಾಡಿ ಪಾಲ್ಗೊಂಡರು. ಇತರ 10,000 ಜನರು ಇದೇ ವೇದಿಕೆ ಮೂಲಕ ಆಸಕ್ತಿಯಿಂದ ಭಾಗವಹಿಸಿದ್ದರು. ಒಟ್ಟೂ ಈ ವೇದಿಕೆ ಮೂಲಕ ಪಾಲ್ಗೊಂಡವರ ಸಂಖ್ಯೆ 17,000 ದಾಟಿದೆ. ಕಳೆದ ವರ್ಷ ಮೂರು ದಿನಗಳೂ ಸೇರಿ ಪಾಲ್ಗೊಂಡ ವ್ಯಾಪಾರೋದ್ಯಮಿಗಳ ಸಂಖ್ಯೆ 3,000 ಆಗಿತ್ತು.

ಇದಲ್ಲದೇ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕೂಡ 2 ಕೋಟಿಗೂ ಹೆಚ್ಚು ಜನರು ಮೇಳದಲ್ಲಿ ಭಾಗಿಯಾಗಿದ್ದಾರೆ. ಟಿವಿ ವಾಹಿನಿಗಳ ಮೂಲಕ ವೀಕ್ಷಿಸಿದವರ ಸಂಖ್ಯೆಯೂ ಅಧಿಕ ಸಂಖ್ಯೆಯಲ್ಲಿದೆ. ಒಟ್ಟಾರೆ ದೇಶ-ವಿದೇಶಗಳ ಕೋಟ್ಯಂತರ ಜನರು ಅತ್ಯಧಿಕ ಸಂಖ್ಯೆಯಲ್ಲಿ ಟೆಕ್​ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.