ETV Bharat / state

ಜನತಾ ದರ್ಶನಕ್ಕೆ ಉತ್ತಮ‌ ಸ್ಪಂದನೆ: ಒಟ್ಟು 6,684 ಅಹವಾಲು, ಮನವಿ ಸ್ವೀಕಾರ.. 6,663 ಅರ್ಜಿ ವಿಲೇವಾರಿ ಬಾಕಿ - ಈಟಿವಿ ಭಾರತ್​ ಕನ್ನಡ ನ್ಯೂಸ್

ಗದಗ ಮತ್ತು ಬೆಳಗಾವಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದೆಲ್ಲೆಡೆ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ.

ಜನತಾ ದರ್ಶನ
ಜನತಾ ದರ್ಶನ
author img

By ETV Bharat Karnataka Team

Published : Sep 25, 2023, 9:40 PM IST

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ಸಂಜೆ 6:30 ರ ವೇಳೆಗೆ ಲಭ್ಯವಿದ್ದ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ. ಈ ಅಂಕಿ-ಅಂಶದಲ್ಲಿ ಮೌಖಿಕ ದೂರುಗಳು ಮತ್ತು ಪರಿಹಾರಗಳು ದಾಖಲಾಗಿಲ್ಲ.

ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. 2100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಅಚ್ಚರಿ ಮೂಡಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿ ಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ. ರಾಜ್ಯಾದ್ಯಂತ ಏಕಕಾಲಕ್ಕೆ ನಡೆಸಿದ ಜನತಾ ದರ್ಶನ ನಮಗೂ ಮೊದಲ ಅನುಭವ. ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ ಎನ್ನುವ ಅಭಿಪ್ರಾಯಗಳು ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ.

ಅನಿವಾರ್ಯ ಕಾರಣಗಳಿಂದ ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಜನತಾ ದರ್ಶನ ನಡೆಯಲಿಲ್ಲ. ಬೆಳಗಾವಿಯಲ್ಲಿ (ಸೆ 26 ರ ಮಂಗಳವಾರ) ನಡೆಯಲಿದೆ. ಮೈಸೂರು ಜಿಲ್ಲೆಯ ಜನತಾ ದರ್ಶನದಲ್ಲಿನ ಕುಂದುಕೊರತೆ ಮನವಿಗಳನ್ನು IPGRS ನಲ್ಲಿ upload ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಎಲ್ಲಾ ಅರ್ಜಿಗಳನ್ನು Manually ಸ್ವೀಕರಿಸಲಾಗಿದ್ದು, ಬಳಿಕ upload ಮಾಡಲಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಸಂಬಂಧ ಸಾವಿರಾರು ಅರ್ಜಿಗಳು ಬಂದಿವೆ. ಸ್ವೀಕರಿಸುವ ವೇಳೆ ಕೆಲವು ಅನಾನುಕೂಲಗಳು ಸಂಭವಿಸಿದ್ದರಿಂದ ಅವುಗಳನ್ನೂ upload ಮಾಡಲು ಸಾಧ್ಯವಾಗಿಲ್ಲ.

ಇದನ್ನೂ ಓದಿ : ಮಂಗಳೂರಿನಲ್ಲಿ ಜನತಾ ದರ್ಶನ; ನೂರಾರು ಅಹವಾಲು ಸ್ವೀಕರಿಸಿದ ಸಚಿವ ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.