ETV Bharat / state

ದೇವಾಲಯಗಳಲ್ಲಿ ಗೋಪೂಜೆ ಜವಾಬ್ದಾರಿ ಪಶುಸಂಗೋಪನೆ ಇಲಾಖೆಯದ್ದು: ಪ್ರಭು ಚವ್ಹಾಣ್

author img

By

Published : Nov 3, 2021, 8:57 PM IST

ಹಸು ಕರೆ ತಂದು ಪೂಜೆ ನೆರವೇರಿಸುವ ಜವಾಬ್ದಾರಿ ಇಲಾಖೆಯೇ ತೆಗೆದುಕೊಳ್ಳಲಿದೆ. ಗೋವುಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಗೋ ಉತ್ಪನ್ನಗಳ ಖರೀದಿಗೆ ಹೆಚ್ಚು ಒತ್ತು ನೀಡಲು ಪಶುಸಂಗೋಪನೆ ಇಲಾಖೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಪ್ರಭು ಚವ್ಹಾಣ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಸಚಿವ ಪ್ರಭು ಚವ್ಹಾಣ್
ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪೂಜೆಯ ದಿನದಂದು ಹಸುಗಳನ್ನು ದೇವಾಲಯಗಳಿಗೆ ಕರೆ ತರುವ ಮತ್ತು ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ಪಶುಸಂಗೋಪನಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಗೋಪೂಜೆ ಕಾರ್ಯಕ್ರಮ ಸಾಂಗವಾಗಿ ನೆರವೇರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಪಶುಸಂಗೋಪನಾ ಅಧಿಕಾರಿಗಳನ್ನು ಈಗಾಗಲೇ ಈ ಕಾರ್ಯಕ್ಕೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ (ಬಲಿಪಾಡ್ಯಮಿ ದಿನ) ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಮುಜುರಾಯಿ ಇಲಾಖೆಯ ಸಹಯೋಗದೊಂದಿಗೆ ಗೋಪೂಜೆ ಕಾರ್ಯಕ್ರಮವನ್ನು ಪಶುಸಂಗೋಪನೆ ಇಲಾಖೆಯಿಂದ ನಡೆಸಲಾಗುತ್ತಿದೆ.

ಹಸು ಕರೆ ತಂದು ಪೂಜೆ ನೆರವೇರಿಸುವ ಜವಾಬ್ದಾರಿ ಇಲಾಖೆಯೇ ತೆಗೆದುಕೊಳ್ಳಲಿದೆ. ಗೋವುಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಗೋ ಉತ್ಪನ್ನಗಳ ಖರೀದಿಗೆ ಹೆಚ್ಚು ಒತ್ತು ನೀಡಲು ಪಶುಸಂಗೋಪನೆ ಇಲಾಖೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಗೋಮಯ ದೀಪ ಬಳಸಲು ಮನವಿ:

ಗೋಮಯದಿಂದ ಮಾಡಿದ ಪರಿಸರಸ್ನೇಹಿ ದೀಪಗಳನ್ನು ಬಳಸುವ ಮೂಲಕ ರಾಜ್ಯದ ರೈತರಿಗೆ, ಗೋಪಾಲಕರಿಗೆ ಉತ್ತೇಜನ ನೀಡುವ ಜೊತೆಗೆ ಜನರು ಈ ದೀಪಾವಳಿ ಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

ಪಶುಸಂಗೋಪನೆ ಇಲಾಖೆ ರಾಜ್ಯದ ಎಲ್ಲ ದೇಗುಲಗಳಲ್ಲಿ ಪೂಜೆ ನಡೆಸುತ್ತಿದ್ದು ಆಯಾ ಕ್ಷೇತ್ರದ ಜನಪ್ರತಿನಿಧಿಗಳು ಬಲಿಪಾಡ್ಯದ ಗೋಪೂಜೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.