ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು ಪ್ರಕಟಿಸಿ ಸರ್ಕಾರ ಆದೇಶ ಹೊರಡಿಸಿದೆ.
59 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿಯನ್ನು ಸರ್ಕಾರ ಪ್ರಕಟಿಸಿದೆ. ಅದರಂತೆ 15 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ. ಎಸ್ ಟಿ ವರ್ಗಕ್ಕೆ 2 ಅಧ್ಯಕ್ಷ ಸ್ಥಾನ, 1 ಉಪಾಧ್ಯಕ್ಷ ಸ್ಥಾನ ಮೀಸಲಿರಿಸಲಾಗಿದೆ.
5 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಎಸ್.ಸಿ ಮಹಿಳೆಯರಿಗೆ ಮೀಸಲಿಡಲಾಗಿದೆ. 15 ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ 11 ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಿಡಲಾಗಿದೆ.
6 ನಗರಳ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಹಾಗೂ 6 ಉಪಾಧ್ಯಕ್ಷ ಸ್ಥಾನ ಬಿಸಿಎ ವರ್ಗ, 4 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಹಾಗೂ 5 ಉಪಾಧ್ಯಕ್ಷ ಸ್ಥಾನ ಎಸ್ ಸಿ ಮಹಿಳೆಗೆ ಮೀಸಲಿಡಲಾಗಿದೆ. 4 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಹಾಗೂ 5 ಉಪಾಧ್ಯಕ್ಷ ಸ್ಥಾನ ಎಸ್ ಸಿಗೆ ಮೀಸಲಿಡಲಾಗಿದೆ. 2 ಎಸ್ ಟಿ ಮಹಿಳೆಯರಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಮೀಸಲಿರಿಸಲಾಗಿದೆ.
6 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ 7 ಉಪಾಧ್ಯಕ್ಷ ಸ್ಥಾನವನ್ನು ಬಿಸಿಎ ಮಹಿಳೆಯರಿಗೆ ಮೀಸಲಿಡಲಾಗಿದೆ. ಬಿಸಿಬಿ ಮಹಿಳೆಯರಿಗೆ ತಲಾ ಒಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಮೀಸಲಿಡಲಾಗಿದೆ. 2 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಒಂದು ಉಪಾಧ್ಯಕ್ಷ ಸ್ಥಾನವನ್ನು ಮೀಸಲಿಡಲಾಗಿದೆ.