ETV Bharat / state

ಬಿಬಿಎಂಪಿ ಚುನಾವಣೆಗೆ ಮತ್ತೆ ಮೂರು ತಿಂಗಳ ಕಾಲಾವಕಾಶ ಕೇಳಿದ ಸರ್ಕಾರ

ಬಿಬಿಎಂಪಿ ಚುನಾವಣೆಗೆ ಮತ್ತೆ ಮೂರು ತಿಂಗಳ ಕಾಲ ಕಾಲಾವಾಕಾಶ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್​​ಗೆ ಮನವಿ ಮಾಡಿದೆ.

government-asked-for-three-months-time-to-bbmp-elections
ಬಿಬಿಎಂಪಿ ಚುನಾವಣೆಗೆ ಮೂರು ತಿಂಗಳ ಕಾಲಾವಕಾಶ ಕೇಳಿದ ಸರ್ಕಾರ
author img

By

Published : Nov 30, 2022, 5:07 PM IST

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮತ್ತೆ ಮೂರು ತಿಂಗಳ ಕಾಲ ಕಾಲಾವಾಕಾಶ ನೀಡುವಂತೆ ಸರ್ಕಾರವು ಹೈಕೋರ್ಟ್​​ಗೆ ಮನವಿ ಮಾಡಿದೆ. ಬಿಬಿಎಂಪಿ ಚುನಾವಣೆಗೆ ಸರ್ಕಾರ ಹೊರಡಿಸಿದ್ದ ಮೀಸಲು ಅಧಿಸೂಚನೆ ಪ್ರಶ್ನಿಸಿ ವಿ.ಶ್ರೀನಿವಾಸ್ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಇಂದು ನಡೆಯಿತು.

ಧಾರವಾಡ ಪೀಠದಿಂದ ವರ್ಚುವಲ್ ಆಗಿ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ವಿಚಾರಣೆಯನ್ನು ಡಿ.6ಕ್ಕೆ ಮುಂದೂಡಿದೆ. ಈ ವೇಳೆ ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಹಾಜರಾಗಿ, ನಿವೃತ್ತ ನ್ಯಾ. ಭಕ್ತವವತ್ಸಲ ಸಮಿತಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದು ಮತ್ತು ರಾಜಕೀಯ ಹಿಂದುಳಿದಿರುವಿಕೆ ಕುರಿತಂತೆ ಮಾಹಿತಿ ಕೇಳಲಾಗಿದೆ. ಈ ಸಂಬಂಧ ಮಾಹಿತಿ ನೀಡಲು ಸಮಿತಿಯು ಸಮಯ ಕೇಳಿದೆ. ಈ ನಿಟ್ಟಿನಲ್ಲಿ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಚುನಾವಣಾ ಆಯೋಗದ ಪರ ವಾದಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಲಾಗಿದೆ. ಈ ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು. ಇದೆಲ್ಲ ವಾದ ಆಲಿಸಿದ ಪೀಠ ವಿಚಾರಣೆಯನ್ನು ಮುಂದೂಡಿತು.

ಬಿಬಿಎಂಪಿ ಚುನಾವಣೆಗೆ ಆಗಸ್ಟ್‌ 3ರಂದು ಹೊರಡಿಸಿದ್ದ ಮೀಸಲಾತಿ ಪಟ್ಟಿಯನ್ನು ಸೆಪ್ಟಂಬರ್​ನಲ್ಲಿ ರದ್ದುಪಡಿಸಿದ್ದ ಹೈಕೋರ್ಟ್, ನವೆಂಬರ್ 30ರ ಅಂತ್ಯದ‌ ವೇಳೆಗೆ ಹೊಸ ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ಡಿಸೆಂಬರ್ 31ಕ್ಕೂ ಮುನ್ನ ಚುನಾವಣೆ ನಡೆಸಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಪಿಎಫ್‌ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.