ETV Bharat / state

ಮಹಿಳಾ ಉದ್ಯಮಿಗಳಿಗೆ ಅಗತ್ಯ ಪ್ರೋತ್ಸಾಹ ನೀಡಲು ಬದ್ದ:  ಸಚಿವ ಜಗದೀಶ್‌ ಶೆಟ್ಟರ್‌ - Karnataka government

ಮಹಿಳೆಯರು ಉದ್ಯಮ ಸ್ಥಾಪಿಸಲು ಅಗತ್ಯ ಪ್ರೋತ್ಸಾಹ ನೀಡಲು ರಾಜ್ಯ ಸರಕಾರ ಬದ್ದವಾಗಿದೆ. ಅಲ್ಲದೆ, ಮಹಿಳೆಯರು ಯಾವುದೇ ಸಹಾಯವಿಲ್ಲದೆ ವಿಶೇಷ ಸವಲತ್ತುಗಳು ಹಾಗೂ ಮೀಸಲಾತಿ ಇಲ್ಲದೆ ಸ್ವಂತ ಬಲದಿಂದಲೇ ಉದ್ಯಮ ಸ್ಥಾಪಿಸುವ ಹಾಗೂ ಎಲ್ಲಾ ರೀತಿಯ ಕ್ಷೇತ್ರಗಳಲ್ಲೂ ಅಭಿವೃದ್ದಿಯನ್ನು ಸಾಧಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಮಹಿಳಾ ಉದ್ದಿಮೆದಾರರ ದಿನಾಚರಣೆ 2020
ಮಹಿಳಾ ಉದ್ದಿಮೆದಾರರ ದಿನಾಚರಣೆ 2020
author img

By

Published : Nov 26, 2020, 3:48 AM IST

ಬೆಂಗಳೂರು: ಬಹಳ ದಿನಗಳಿಂದ ಹಂಚಿಕೆಯಾಗದೇ ಇದ್ದ ಮಹಿಳಾ ಕೈಗಾರಿಕಾ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅಲ್ಲದೆ, ಮಹಿಳಾ ಉದ್ದಿಮೆದಾರರು ಹೆಚ್ಚಿನ ರೀತಿಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗುವಂತೆ ರಾಜ್ಯ ಸರಕಾರದ ವತಿಯಿಂದ ಅಗತ್ಯ ಪ್ರೋತ್ಸಾಹ ನೀಡಲು ಬದ್ದರಾಗಿದ್ದೇವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಮಹಿಳಾ ಉದ್ದಿಮೆದಾರರ ದಿನಾಚರಣೆ 2020 ಅಂಗವಾಗಿ ಇಂದು ಎಫ್‌ಕೆಸಿಸಿಐ ವತಿಯಿಂದ ಬೆಂಗಳೂರಿನ ಎಫ್‌ಕೆಸಿಸಿಐ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳಾ ಉದ್ಯಮಿ ಪಾರ್ಕ್‌ಗಳನ್ನು ಘೋಷಿಸಿ ಹಲವಾರು ವರ್ಷಗಳೇ ಸಂದಿವೆ. ಆದರೆ ಇದುವರೆಗೂ ಅವುಗಳಲ್ಲಿನ ಕೈಗಾರಿಕಾ ನಿವೇಶನಗಳ ಹಂಚಿಕೆ ಕಾರ್ಯವನ್ನು ಪ್ರಾರಂಭಿಸಿರಲಿಲ್ಲ. ಈಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರಾಜ್ಯದ ಎಲ್ಲಾ ಭಾಗಗಳಲ್ಲೂ ಇರುವ ಮಹಿಳಾ ಕೈಗಾರಿಕಾ ಪಾರ್ಕಿನ ನಿವೇಶನಗಳನ್ನು ಹಂಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Jagadeesh shetter
ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳನ್ನ ವೀಕ್ಷಿಸುತ್ತಿರುವ ಶೆಟ್ಟರ್​
ಮಹಿಳೆಯರು ಉದ್ಯಮ ಸ್ಥಾಪಿಸಲು ಅಗತ್ಯ ಪ್ರೋತ್ಸಾಹ ನೀಡಲು ರಾಜ್ಯ ಸರಕಾರ ಬದ್ದವಾಗಿದೆ. ಅಲ್ಲದೆ, ಮಹಿಳೆಯರು ಯಾವುದೇ ಸಹಾಯವಿಲ್ಲದೆ ವಿಶೇಷ ಸವಲತ್ತುಗಳು ಹಾಗೂ ಮೀಸಲಾತಿ ಇಲ್ಲದೆ ಸ್ವಂತ ಬಲದಿಂದಲೇ ಉದ್ಯಮ ಸ್ಥಾಪಿಸುವ ಹಾಗೂ ಎಲ್ಲಾ ರೀತಿಯ ಕ್ಷೇತ್ರಗಳಲ್ಲೂ ಅಭಿವೃದ್ದಿಯನ್ನು ಸಾಧಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕಲ್‌ ಎಂ ಸುಂದರ್‌, ಎಫ್‌ಕೆಸಿಸಿಐ ಮಹಿಳಾ ಉದ್ದಿಮೆದಾರರ ಸಮಿತಿಯ ಅಧ್ಯಕ್ಷೆ ರೂಪಾ ರಾಣಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳನ್ನು ಸಚಿವರು ವೀಕ್ಷಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.