ETV Bharat / state

ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ

ಇದೇ ತಿಂಗಳ 20ರಂದು ಸಂಪುಟ ಸಭೆಯಲ್ಲಿ ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ಸಂಬಂಧ ಸುಗ್ರೀವಾಜ್ಞೆಗೆ ಸರ್ಕಾರ ಗ್ರೀನ್‌ ಸಿಗ್ನಲ್ ಪಡೆಯಲಿದೆ‌. ಅಂದೇ ಸಂಪುಟ ಸಭೆ ಬಳಿಕ ಎರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಹೊರಡಿಸಲಿದೆ‌.

government-decide-to-ordinance-on-sc-st-reservation-hike
ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ
author img

By

Published : Oct 17, 2022, 5:32 PM IST

Updated : Oct 17, 2022, 7:56 PM IST

ಬೆಂಗಳೂರು: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಈ ಮುಂಚೆ ಅಧಿಸೂಚನೆ ಹೊರಡಿಸಲು ಮುಂದಾಗಿದ್ದ ಸರ್ಕಾರ ಇದೀಗ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ. ಗುರುವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ಸಿಗಲಿದೆ. ಬಳಿಕ ಬೆಳಗಾವಿ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡಿಸಲು ತೀರ್ಮಾನಿಸಲಾಗಿದೆ.

ಎಸ್​ಸಿ ಸಮುದಾಯಕ್ಕೆ ಈಗಿರುವ ಶೇ.15ರಿಂದ ಶೇ.17ಕ್ಕೆ ಮೀಸಲಾತಿ, ಎಸ್ಟಿ ಸಮುದಾಯಕ್ಕೆ ಈಗ ಇರುವ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಿಸಲು ಸಚಿವ ಸಂಪುಟ ಸಬೆಯಲ್ಲಿ ಈಗಾಗಲೇ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮುಂಚೆ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದರು. ಬರೇ ಸರ್ಕಾರಿ ಆದೇಶದಿಂದ ಮೀಸಲಾತಿ ಹೆಚ್ಚಳಕ್ಕೆ ಕಾನೂನು ತೊಡಕು ಬರುವ ಸಾಧ್ಯತೆ ಇರುವ ಕಾರಣ ಇದೀಗ ಸುಗ್ರೀವಾಜ್ಞೆ ಮೂಲಕ ಮೀಸಲಾತಿ ಹೆಚ್ಚಳ ಸಂಬಂಧ ಕಾನೂನು ತರಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಇದೇ ತಿಂಗಳ 20ರಂದು ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಸರ್ಕಾರ ಗ್ರೀನ್‌ ಸಿಗ್ನಲ್ ಪಡೆಯಲಿದೆ‌. ಅಂದೇ ಸಂಪುಟ ಸಭೆ ಬಳಿಕ ಎರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಹೊರಡಿಸಲಿದೆ‌. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮೀಸಲಾತಿ ಹೆಚ್ಚಳ‌ ಕುರಿತ ವಿಧೇಯಕ ತರಲಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಇದೇ ವಿಚಾರವಾಗಿ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು, ನನಗೆ ತಿಳಿದಿರುವ ಮಾಹಿತಿಯಂತೆ ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರವನ್ನು ಯಾರೂ ಪ್ರಶ್ನೆ ಮಾಡುವುದಿಲ್ಲ. ಕೇಂದ್ರ ಸರ್ಕಾರ ಕೂಡ ಪರಿಚ್ಛೇದ 9ಕ್ಕೆ ಸೇರಿಸಿ ಕಾನೂನು ತೊಡಕು ನಿವಾರಿಸಲಿದೆ. ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ಆದೇಶವನ್ನು ಮಂಡನೆ ಮಾಡಿ ನಂತರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಇದಕ್ಕೂ ಮುನ್ನ ಸುಗ್ರೀವಾಜ್ಞೆಯ ಮೂಲಕ ಇದನ್ನು ಜಾರಿಗೊಳಿಸುವುದರಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ತಕ್ಷಣದಿಂದಲೇ ಮೀಸಲಾತಿ ಸೌಲಭ್ಯ ಪರಿಶಿಷ್ಟ ಜಾತಿ, ಪಂಗಡಗಳಿಗೆ ಲಭ್ಯವಾಗಲಿದೆ.

ರಾಜ್ಯ ಸರ್ಕಾರದ ನಿರ್ಧಾರವನ್ನು ಕೇಂದ್ರ ಸರ್ಕಾರದ ಮಟ್ಟದಲ್ಲಿ ಊರ್ಜಿತಗೊಳಿಸಿಕೊಂಡು ಬರಲಿ ಎಂಬ ಸವಾಲುಗಳಿಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಪರಿಶಿಷ್ಟರ ಮೀಸಲಾತಿ ಹೆಚ್ಚಳ ಮಾಡಿ ಕೈಗೊಂಡ ನಿರ್ಧಾರಕ್ಕೆ ಯಾವ ಅಡ್ಡಿಯೂ ಬರಲಾರದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸರ್ಕಾರ ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೆ: ಸಚಿವ ಗೋವಿಂದ ಕಾರಜೋಳ

Last Updated : Oct 17, 2022, 7:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.