ಬೆಂಗಳೂರು: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಇಂದು ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಲಕ್ಷಾಂತರ ಭಕ್ತ ಸಮೂಹ ಹೊಂದಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.
ಪಂಚಪೀಠಗಳಿಂದ ಸ್ವಾಗತ: ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶ್ರೀ, ಉಜ್ಜಯಿನಿ ಪೀಠದ ಜಗದ್ಗುರು ಅಭಿನವ ಸಿದ್ದಲಿಂಗ ರಾಜದೇಶಿಕೇಂದ್ರ ಶ್ರೀಗಳು, ಕೇದಾರ ಪೀಠದ ರಾವಲ್ ಜಗದ್ಗುರು ಭೀಮಾಶಂಕರಲಿಂಗ ಶ್ರೀ, ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು, ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ರೇಣುಕಾಚಾರ್ಯ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಇದನ್ನೂ ಓದಿ: ಚುನಾವಣೆ ಸುಧಾರಣೆ ಕುರಿತು ಚರ್ಚೆಗೆ 2 ದಿನ ಫಿಕ್ಸ್: ಸ್ಪೀಕರ್ ಕಾಗೇರಿ