ETV Bharat / state

ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಎಲ್ಲೆಲ್ಲಿ ರಜೆ ಘೋಷಣೆ..? - ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ

ಚುನಾವಣೆ ನಡೆಯುವ ವಾರ್ಡ್​ನ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕ ಉದ್ಯಮಗಳು ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.

election
ಚುನಾವಣೆ
author img

By

Published : Aug 31, 2021, 11:03 PM IST

Updated : Sep 3, 2021, 3:21 PM IST

ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ/ ಉಪ ಚುನಾವಣೆಗೆ ಮತದಾನ ನಡೆಯುವ ಸೆಪ್ಟೆಂಬರ್ 3 ರಂದು ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.

ಮತದಾನ ಮಾಡಲು ಅವಕಾಶವಾಗುವಂತೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ಆಯಾಯ ನಗರ ಸ್ಥಳೀಯ ಸಂಸ್ಥೆಯ ಆಯಾ ವಾರ್ಡ್​ನ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೆಪ್ಟೆಂಬರ್ 3 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

ವೇತನ ಸಹಿತ ರಜೆ: ಚುನಾವಣೆ ನಡೆಯುವ ವಾರ್ಡ್​ನ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕ ಉದ್ಯಮಗಳು ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರ ಸಂಸ್ಥೆ ಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.

  • " class="align-text-top noRightClick twitterSection" data="">

ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು, ಆದರೆ, ಚುನಾವಣೆ ನಡೆಯುತ್ತಿರುವ ವಾರ್ಡ್‌ನ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರರಾಗಿರುವವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೆ. 3 ರಂದು ವೇತನ ಸಹಿತ ರಜೆ ನೀಡಲು ಆದೇಶಿಸಿದೆ.

Government Declared leave for Muncipal corporation election
ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರದಿಂದ ಆದೇಶ

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತುಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು, ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು. ಸಾರ್ವತ್ರಿಕ ಚುನಾವಣೆ / ಉಪಚುನಾವಣೆ ನಡೆಯುವ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆ ಮತ್ತು ಪಟ್ಟಣ ಪಂಚಾಯತಿಗಳ ಪಟ್ಟಿಯನ್ನು ಈ ಕೆಳಕಂಡಂತೆ ಇದೆ.

ಹು-ಧಾ ಮಹಾನಗರ ಪಾಲಿಕೆ ಚುನಾವಣೆ : ನೌಕರ ಮತದಾರರಿಗೆ ವೇತನ ಸಹಿತ ರಜೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನದ ದಿನದಂದು ಎಲ್ಲ ವರ್ಗದ ನೌಕರ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಮಹಾನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಇಲಾಖೆ, ಖಾಸಗಿ ಉದ್ಯೋಗದಾತರು ಈ ಕುರಿತು ಕ್ರಮವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ್​ ತಿಳಿಸಿದ್ದಾರೆ.

ಓದಿ: ನೋ‌ ವ್ಯಾಕ್ಸಿನೇಷನ್‌- ನೋ ರೇಷನ್, ನೋ ಪೆನ್ಷನ್ ವಿರುದ್ಧ ಡಿಕೆಶಿ ಆಕ್ರೋಶ..!

Last Updated : Sep 3, 2021, 3:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.