ETV Bharat / state

ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಸಮರ್ಥಿಸಿಕೊಂಡ ಸರ್ಕಾರ

ವಿಧಾನಸಭಾ ಕ್ಷೇತ್ರಗಳ ಭೌಗೋಳಿಕ ವಿಸ್ತೀರ್ಣ ಹಾಗೂ ಜನಸಂಖ್ಯೆ ಬೆಳವಣಿಗೆಯ ಆಧಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ಗಳನ್ನು ರಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ನಲ್ಲಿ ಸಮರ್ಥಿಸಿಕೊಂಡಿದೆ.

government-defends-bbmp-ward-redistribution-in-high-court
ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆ ಸಮರ್ಥಿಸಿಕೊಂಡ ಸರ್ಕಾರ
author img

By

Published : Sep 10, 2022, 8:45 AM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಹೊಸದಾಗಿ 243 ವಾರ್ಡ್‌ಗಳನ್ನು ರಚಿಸಿರುವ ಕ್ರಮವನ್ನು ರಾಜ್ಯ ಸರ್ಕಾರ ಹೈಕೋರ್ಟ್​ನಲ್ಲಿ ಸಮರ್ಥಿಸಿಕೊಂಡಿದೆ. ವಾರ್ಡ್‌ಗಳ ಮರು ವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ವೇಳೆ, ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸರ್ಕಾರವು ವಿಧಾನಸಭಾ ಕ್ಷೇತ್ರಗಳ ಭೌಗೋಳಿಕ ವಿಸ್ತೀರ್ಣ ಹಾಗೂ ಜನಸಂಖ್ಯೆ ಬೆಳವಣಿಗೆಯ ಆಧಾರದಲ್ಲಿ ವಾರ್ಡ್‌ಗಳನ್ನು ರಚಿಸಲಾಗಿದೆ ಎಂದು ತಿಳಿಸಿದೆ.

ರಾಜ್ಯ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ, 2011ರ ಜನಗಣತಿ ಆಧರಿಸಿ ಪ್ರತಿ ವಾರ್ಡ್‌ಗೆ ಜನಸಂಖ್ಯೆ ನಿಗದಿಪಡಿಸಲಾಗಿದೆ. ಅಲ್ಲದೇ ವಿಧಾನಸಭಾ ಕ್ಷೇತ್ರದ ಭೌಗೋಳಿಕ ವಿಸ್ತೀರ್ಣ, ಕ್ಷೇತ್ರದ ಜನಸಂಖ್ಯೆ ಬೆಳವಣಿಗೆ ಆಧರಿಸಿ ವಾರ್ಡ್‌ಗಳನ್ನು ರಚಿಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ವಾರ್ಡ್ ವಿಂಗಡಣೆಯಲ್ಲಿ ಶೇ.10ರಷ್ಟು ಜನಸಂಖ್ಯೆ ಏರಿಳಿತದ ಅನುಪಾತ ಅನುಸರಿಸಲಾಗಿದೆ.

ಅದರಂತೆ, 34 ಸಾವಿರದಿಂದ 39 ಸಾವಿರ ಜನಸಂಖ್ಯೆಯ ಆಧಾರದಲ್ಲಿ ಬಿಬಿಎಂಪಿ ವಾರ್ಡ್‌ ವಿಂಗಡಣೆ ಮಾಡಲಾಗಿದೆ. ಕೆಲವು ಕಡೆ ಭೌಗೋಳಿಕ ವಿಸ್ತೀರ್ಣ ಹೆಚ್ಚಿದ್ದು, ಜನಸಂಖ್ಯೆ ಕಡಿಮೆ ಇದೆ. ಇನ್ನೂ ಕೆಲವಡೆ ಭೌಗೋಳಿಕ ವಿಸ್ತೀರ್ಣ ದೊಡ್ಡದಾಗಿದ್ದು, ಜನಸಂಖ್ಯೆ ಕಡಿಮೆ. ವಾರ್ಡ್‌ಗಳ ಮರುವಿಂಗಡಣೆಗೆ 2011ರ ಜನಸಂಖ್ಯೆ ಆಧಾರದಲ್ಲಿ ನ್ಯಾಯೋಚಿತ ಮಾರ್ಗಗಳನ್ನು ಅನುಸರಿಸಲಾಗಿದೆ ಎಂದು ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡರು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ವಾದ ಮಂಡಿಸಿ, ಆಯೋಗ ಈಗಾಗಲೇ ತನ್ನ ನಿಲುವನ್ನು ಕೋರ್ಟ್‌ಗೆ ಸ್ಪಷ್ಟವಾಗಿ ತಿಳಿಸಿದೆ. ಈ ವಿಚಾರದಲ್ಲಿ ಅರ್ಜಿದಾರರ ಪರ ವಕೀಲರು ಮತ್ತೆ ಮತ್ತೆ ತಕರಾರು ತೆಗೆಯುವುದು ಸಮಂಜಸವಲ್ಲ. ಈಗ ನಿಗದಿಪಡಿಸಲಾಗಿರುವ ಮರುವಿಂಗಡಣೆಯ ಅನುಸಾರವೇ ಚುನಾವಣೆ ನಡೆಸಬೇಕು. ಏನಾದರೂ ಆಕ್ಷೇಪಣೆ ಅಥವಾ ಲೋಪದೋಷಗಳು ಇದ್ದಲ್ಲಿ ಅದನ್ನು ಮುಂದಿನ ಚುನಾವಣೆಯಲ್ಲಿ ಸರಿಪಡಿಸಿಕೊಳ್ಳಬಹುದು. ಚುನಾಯಿತ ಪ್ರತಿನಿಧಿಗಳಲ್ಲಿದೆ ಪಾಲಿಕೆಯನ್ನು ಆಡಳಿತಾಂಗದ ಕೈಯಲ್ಲಿ ನಡೆಸಿಕೊಂಡು ಹೋಗುವುದು ಸೂಕ್ತವಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿತು.

ಇದನ್ನೂ ಓದಿ: ಎನ್​ಐಎ ನ್ಯಾಯಾಲಯವು ಐಪಿಸಿ ಅಡಿಯಲ್ಲಿನ ಪ್ರಕರಣ ವಿಚಾರಣೆ ನಡೆಸಬಹುದು: ಹೈಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.