ETV Bharat / state

ಗ್ರಾಮ ಪಟ್ಟಣಗಳಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಲು ವಿಳಂಬ.. ​ಸಿಎಸ್​ಗೆ ಎಚ್ಚರಿಕೆ ನೀಡಿದ ಹೈಕೋರ್ಟ್ - ನ್ಯಾಯಾಂಗ ನಿಂದನೆ

ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಸರ್ಕಾರ ಜಾಗ ಒದಗಿಸಲು ವಿಳಂಬ- ಆದೇಶ ಪಾಲಿಸದಿದ್ದಕ್ಕೆ ಹೈಕೋರ್ಟ್​ ನ್ಯಾಯಪೀಠ ಅಸಮಾಧಾನ-ಮುಖ್ಯ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಎಚ್ಚರಿಕೆ- ಮಹಮ್ಮದ್ ಇಕ್ಬಾಲ್ ಎಂಬುವರಿಂದ ಸಿವಿಲ್ ನ್ಯಾಯಾಂಗಕ್ಕೆ ನಿಂದನೆ ಅರ್ಜಿ ಸಲ್ಲಿಕೆ.

high court
ಹೈಕೋರ್ಟ್​
author img

By

Published : Jan 31, 2023, 9:27 PM IST

ಬೆಂಗಳೂರು: ಸ್ಮಶಾನ ಜಾಗವಿಲ್ಲದಿರುವ ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಸ್ಥಳ ಒದಗಿಸಲು ನಿರ್ದೇಶಿಸಿ ಹೊರಡಿಸಿದ ಆದೇಶವನ್ನು ಶೀಘ್ರ ಜಾರಿ ಮಾಡದಿದ್ದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ. ರಾಜ್ಯದಲ್ಲಿ ಸ್ಮಶಾನ ಜಾಗವಿಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್ ಹೊರಡಿಸಿದ ಆದೇಶ ಜಾರಿ ಮಾಡದಿರುವ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ನಗರದ ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಎರಡು ವಾರ ಕಾಲಾವಕಾಶ ನೀಡುವಂತೆ ಮನವಿ: ಅರ್ಜಿಯ ವಿಚಾರಣೆಯನ್ನೂ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ನ್ಯಾಯಾಲಯ ಆದೇಶದ ಪಾಲನೆಗೆ ಸಂಬಂಧಿಸಿದಂತೆ ಸಮಗ್ರ ವರದಿ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ನ್ಯಾಯಪೀಠ ಅಸಮಾಧಾನ: ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಈಗಾಗಲೇ ಹೈಕೋರ್ಟ್ ಸಾಕಷ್ಟು ಸಮಯ ನೀಡಿದ್ದರೂ ಸರ್ಕಾರ ಮಾತ್ರ ಮತ್ತೆ ಮತ್ತೆ ಕಾಲಾವಾಶ ಕೋರುತ್ತಿದೆ. ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ಭರವಸೆ ನೀಡಿದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಜಾರಿ ಮಾಡುವುದಕ್ಕೆ ಮುಂದಾಗಿಲ್ಲ. ಹಾಗಾಗಿ, ಕೊನೆಯದಾಗಿ ಒಂದು ವಾರ ಕಾಲಾವಕಾಶ ನೀಡಲಾಗುವುದು. ಅಷ್ಟರಲ್ಲಿ ನ್ಯಾಯಾಲಯದ ಆದೇಶ ಜಾರಿ ಮಾಡಬೇಕು ಎಂದು ಸರ್ಕಾರಕ್ಕೆ ತಿಳಿಸಿ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿತು.

ಮುಖ್ಯ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ: ಅಲ್ಲದೆ, ಒಂದೊಮ್ಮೆ ನ್ಯಾಯಾಲಯದ ಆದೇಶ ಜಾರಿಗೊಳಿಸಲು ಸರ್ಕಾರ ವಿಫಲವಾದರೆ ಮುಂದಿನ ವಿಚಾರಣೆಗೆ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿ ಖುದ್ದು ಹಾಜರಾಗಬೇಕು. ಅವರ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಿ ಆದೇಶಿಸಲಾಗುವುದು ಎಂದು ನ್ಯಾಯಪೀಠ ಎಚ್ಚರಿಕೆ ನೀಡಿ ವಿಚಾರಣೆಯನ್ನು ಮುಂದೂಡಿತು.

27 903 ಗ್ರಾಮಗಳಿಗೆ ಸ್ಮಶಾನಕ್ಕೆ ಜಮೀನು ಮಂಜೂರಿ : ಈ ಹಿಂದೆ ಅರ್ಜಿ 2023ರ ಜ.10ರಂದು ವಿಚಾರಣೆಗೆ ಬಂದಿದ್ದ ಸಂದರ್ಭದಲ್ಲಿ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿತ್ತು. ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ ಈವರೆಗೆ 27,903 ಗ್ರಾಮಗಳಿಗೆ ಸ್ಮಶಾನಕ್ಕೆ ಜಮೀನು ಒದಗಿಸಲಾಗಿದೆ. 319 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒದಗಿಸಬೇಕಾಗಿದೆ. 56 ಗ್ರಾಮಗಳಲ್ಲಿ ಆಗಿರುವ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಲಾಗುತ್ತಿದೆ. 1,394 ಗ್ರಾಮಗಳು ಅಧಿಕೃತವಾಗಿ ಕಂದಾಯ ಸ್ಥಾನಮಾನ ಮತ್ತು ಜನ ವಸತಿ ಇಲ್ಲದ ಗ್ರಾಮಗಳಾಗಿವೆ ಎಂದು ವಿವರಣೆ ನೀಡಿತ್ತು.

ಈ ಅಂಶವನ್ನು ದಾಖಲಿಸಿಕೊಂಡಿದ್ದ ನ್ಯಾಯಪೀಠ, ಬಾಕಿ ಉಳಿದಿರುವ ಗ್ರಾಮಗಳಿಗೆ ಸ್ಮಶಾನ ಜಾಗ ಒದಗಿಸಬೇಕು. ಈವರೆಗೂ ಯಾವೆಲ್ಲಾ ಗ್ರಾಮಗಳಿಗೆ ಸ್ಮಶಾನ ಜಾಗ ಒದಗಿಸಲಾಗಿದೆಯೋ, ಆ ಕುರಿತು ಆರ್‌ಟಿಸಿ ಮತ್ತು ಸ್ಮಶಾನ ಜಾಗದ ತೆರವಿಗೆ ಸಂಬಂಧಿಸಿದಂತೆ ಸಮಗ್ರವಾದ ವರದಿ ಮಾಹಿತಿ ಒದಗಿಸಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠವು ನಿರ್ದೇಶನ ನೀಡಿತ್ತು.

ಇದನ್ನೂಓದಿ:ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು ಪ್ರಕರಣ : ಆಕ್ಷೇಪಣೆ ಸಲ್ಲಿಸಲು 2 ವಾರ ಕಾಲಾವಕಾಶ ನೀಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.