ETV Bharat / state

ಉಪನ್ಯಾಸಕರ ಜೀವದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಹೆಚ್​​ಡಿಕೆ ವಾಗ್ದಾಳಿ - Board of Secondary Education

ದ್ವಿತೀಯ ಪಿಯುಸಿ ಮೌಲ್ಯಮಾಪನ ಕುರಿತಂತೆ ಸರ್ಕಾರ ಉಪನ್ಯಾಸಕರ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕನಿಷ್ಠ ಸೌಲಭ್ಯಗಳನ್ನು ಒದಗಿಸದೇ ಮೌಲ್ಯಮಾಪನಕ್ಕೆ ಒತ್ತಡ ತಂತ್ರ ಅನುಸರಿಸುತ್ತಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

government flirting with lives of puc lecturers: Kumaraswamy
ಉಪನ್ಯಾಸಕರ ಜೀವದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಕುಮಾರಸ್ವಾಮಿ ವಾಗ್ದಾಳಿ
author img

By

Published : May 30, 2020, 10:21 PM IST

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರ ಮೇಲೆ ರಾಜ್ಯ ಸರ್ಕಾರ ಒತ್ತಡ ತಂತ್ರ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ಕೊರೊನಾ ಸೋಂಕು ಸಮುದಾಯಕ್ಕೆ ವ್ಯಾಪಿಸುವ ಭೀತಿಯಲ್ಲಿರುವಾಗ ಬೆದರಿಕೆಯ ಅಸ್ತ್ರ ಬಳಸುವ ಮೂಲಕ ಉಪನ್ಯಾಸಕರ ಜೀವದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿಕೆ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸೂಕ್ತ ವಸತಿ, ಸಾರಿಗೆ ಮತ್ತು ಹೋಟೆಲ್ ಸೌಲಭ್ಯ ಇಲ್ಲದಿರುವಾಗ ಹೊರ ಜಿಲ್ಲೆಗಳಿಗೆ ಹೋಗಿ ಉಪನ್ಯಾಸಕರು ಮೌಲ್ಯಮಾಪನ ಮಾಡುವುದು ಬಲು ಕಷ್ಟ. ಯಾವುದೇ ಕನಿಷ್ಠ ಸೌಲಭ್ಯಗಳನ್ನು ಒದಗಿಸದೇ ಮೌಲ್ಯಮಾಪನಕ್ಕೆ ಒತ್ತಡ ತಂತ್ರ ಅನುಸರಿಸುತ್ತಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರನ್ನು ನಿಯೋಜಿಸುವ ಮೊದಲು ವಿಕೇಂದ್ರೀಕರಣ ವ್ಯವಸ್ಥೆಯಾಗಬೇಕು. ಡಿಡಿಪಿಐಗಳು, ಜಿಲ್ಲಾಧಿಕಾರಿಗಳಿಂದ ಮೌಲ್ಯಮಾಪನಕ್ಕೆ ಬರದಿದ್ದರೆ ವೇತನ ರಹಿತ ರಜೆ ಎಂಬ 'ಧಮ್ಕಿ' ಹಾಕಿಸುತ್ತಿರುವುದು ಸರ್ಕಾರದ ಅವಿವೇಕದ ಕ್ರಮ ಎಂದು ಕಿಡಿಕಾರಿದ್ದಾರೆ.

ಪಿಯುಸಿ ಪರೀಕ್ಷೆ ಮುಗಿಯಲು ಜೂನ್ 18ರ ವರೆಗೆ ಕಾಲಾವಕಾಶ ಇದೆ. ಸರ್ಕಾರ 'ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಪ್ರಯೋಗ ಮಾಡಲು ಮುಂದಾಗಿರುವುದನ್ನು ತಕ್ಷಣ ಸ್ಥಗಿತಗೊಳಿಸುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.