ETV Bharat / state

ಗುಡುಗು ಸಿಡಿಲಿನ ಅಪಾಯದಿಂದ ತಪ್ಪಿಸಲು ಸುರಕ್ಷತಾ ಮಾರ್ಗಸೂಚಿ ಹೊರಡಿಸಿದ ಸರ್ಕಾರ - bengaluru news

ಗುಡುಗು ಸಿಡಿಲಿನ ಅಪಾಯದಿಂದ ತಪ್ಪಿಸಲು ಸುರಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೆಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ, ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

government-has-issued-safety-guidelines-to-avoid-the-danger-of-thunder-and-lightning
ಗುಡುಗು ಸಿಡಿಲಿನ ಅಪಾಯದಿಂದ ತಪ್ಪಿಸಲು ಸುರಕ್ಷತಾ ಮಾರ್ಗಸೂಚಿ ಹೊರಡಿಸಿದ ಸರ್ಕಾರ
author img

By

Published : May 22, 2023, 10:37 PM IST

ಬೆಂಗಳೂರು: ಮುಂಗಾರಿನಿಂದ ರಾಜ್ಯದಲ್ಲಿ ಗುಡುಗು ಸಿಡಿಲಿನಿಂದ ಪ್ರಾಣ ಹಾನಿ ಸಂಭವಿಸುವ ಸಾಧ್ಯತೆಗಳು ಹೆಚ್ಚಿವೆ. ಈ ಹಿನ್ನೆಲೆ ಕಂದಾಯ ಇಲಾಖೆ ಸುರಕ್ಷತಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೆಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ತನ್ನ ಅಧಿಸೂಚನೆಯಲ್ಲಿ ಸೂಚಿಸಿದೆ.

  • ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ/ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು.
  • ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ Indian Meteorological Department (IMD) ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ನಿರ್ದಿಷ್ಟ ಮುನ್ನಚ್ಚರಿಕೆಯನ್ನು Common Alerting Protocol (CAP)ನ ಮೂಲಕ ಪ್ರಸಾರ ಮಾಡಿ, ಈ ಕುರಿತು ಅರಿವು ಮೂಡಿಸಬೇಕು.
  • ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕ ಸಹ ಮಾಹಿತಿ ಹಾಗೂ ಜಾಗೃತಿ ಮೂಡಿಸಬೇಕು.
  • ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳಿವಳಿಕೆ ಹಾಗೂ ಮಾಹಿತಿ ನೀಡಬೇಕು.
  • ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡಬೇಕು ಹಾಗೂ ಮಾಹಿತಿ ಶಿಕ್ಷಣ ಸಂವಹನ (ಐಇಸಿ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
  • ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು Common Alerting Protocol (CAP) ಮುಖಾಂತರ ಬರುವ ಮಸೇಜ್‌ಗಳನ್ನು ಮೊಬೈಲ್‌ನಲ್ಲಿ ಗಮನಿಸಿಸಬೇಕು.
  • ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು.
  • ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯಬೇಕು.
  • ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು.
  • ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು.
  • ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು.
  • ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು.
  • ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
  • ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು.
  • ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು.
  • ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ತೊಳೆಯಬಾರೆದು.
  • ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪಯಾಣವನ್ನು ಮುಂದೂಡಿ.
  • ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರಿ.
  • ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು.
  • ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ, ವಾಹನದ ಒಳಗೆ ಇರಬೇಕು. ಅರಣ್ಯ, ಪ್ರದೇಶದಿಂದ, ಗಿಡ-ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು. ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು, ಸಂಭವಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ರಾಜ್ಯದ ವಿವಿಧೆಡೆ ಭಾರೀ ಗಾಳಿ ಸಹಿತ ಮಳೆ.. ಏಳು ಮಂದಿ ಸಾವು, ಜನಜೀವನ ಅಸ್ತವ್ಯಸ್ತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.