ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾವನ್ನು ಮುಂದಿಟ್ಟು ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿರುವ ಅವರು, ಕಳ್ಳನಿಗೊಂದು ಪಿಳ್ಳೆ ನೆವ ಎಂಬಂತೆ, ಅಭಿವೃದ್ಧಿ ಕಾರ್ಯಕ್ಕೆ ಕೊರೊನಾ ನೆಪವಾಗಿದೆ ಎಂದಿದ್ದಾರೆ.
ಲೋಕೋಪಯೋಗಿ ಹಾಗೂ ಬಿಬಿಎಂಪಿಯಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾವತಿಸಲು ಆರ್ಥಿಕ ಸಂಕಷ್ಟದ ಕಾರಣ ಹೇಳುತ್ತಿದ್ದಾರೆ. ಆದರೆ, ರಾಜ್ಯ ಬಿಜೆಪಿಯವರು ಖಜಾನೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಹಣವಿದೆ ಎನ್ನುತ್ತಾರೆ. ಖಜಾನೆಯಲ್ಲಿ ಹಣವಿದ್ದ ಮೇಲೆ ಸಾವಿರಾರು ಕೋಟಿ ರೂ ಬಿಲ್ ಬಾಕಿ ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ ...ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾರಬೇಕು, ಅದಕ್ಕೆ ಧ್ವನಿ ಎತ್ತುತ್ತಿಲ್ಲ : ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ ಜಾತಿ ಗಣತಿ ವರದಿ ಬಿಡುಗಡೆ ಆಗಬೇಕು. ಅನೇಕ ಸಣ್ಣ ಮತ್ತು ಅತೀ ಸಣ್ಣ ಹಿಂದುಳಿದ ವರ್ಗಗಳಿಗೆ ಸಮಪಾಲು ಸಿಗುತ್ತಿಲ್ಲ. ಈ ವೈಜ್ಞಾನಿಕ ವರದಿಯಿಂದ ನ್ಯಾಯ ದೊರಕಿಸಲು ಸಾಧ್ಯ. ರಾಜ್ಯ ಸರ್ಕಾರ ವರದಿಯನ್ನು ಕೂಡಲೇ ವಿಧಾನಸಭೆಯಲ್ಲಿ ಮಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.