ETV Bharat / state

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

author img

By ETV Bharat Karnataka Team

Published : Sep 30, 2023, 7:28 PM IST

Updated : Sep 30, 2023, 8:11 PM IST

government has submitted a review petition
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನೀರು ಬಿಡುವ ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಇಂದು ಸಂಜೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆಯಾಗಿದೆ. ಮರು ಪರಿಶೀಲನಾ ಅರ್ಜಿಯಲ್ಲಿ, ನೀರು ಬಿಡಲು ಸಾಧ್ಯವಿಲ್ಲ. ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಮನವಿಯನ್ನು ಮಂಡನೆ ಮಾಡಲಾಗಿದೆ.

ನಿನ್ನೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತೆ ಮೂರು ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ದಿನಾಂಕ ವಿಸ್ತರಣೆ ಮಾಡಿ ಆದೇಶ ನೀಡಿತ್ತು. ಈ ಆದೇಶದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಶುಕ್ರವಾರ ಕಾನೂನು ತಜ್ಙರೊಂದಿಗೆ ಸಮಾಲೋಚನೆ ನಡೆಸಲಾಗಿತ್ತು. ಈ ಸಭೆಯಲ್ಲಿ ಮಾಜಿ ಅಡ್ವೋಕೆಟ್​ ಜನರಲ್​ಗಳು, ಹಿರಿಯ ನ್ಯಾಯವಾದಿಗಳು ಸರ್ಕಾರಕ್ಕೆ ಹಲವು ಮಹತ್ವದ ಸಲಹೆ ಸೂಚನೆಗಳನ್ನು ನೀಡಿದ್ದರು.

ಇದನ್ನೂ ಓದಿ: ಕೂಡಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸರ್ಕಾರದ ನಿರ್ಧಾರ

ಈ ಸಭೆ ಬಳಿಕ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ , ನಿವೃತ್ತ ನ್ಯಾಯಮೂರ್ತಿಗಳು ಅವರ ಅನುಭವದಿಂದ ಕೆಲ ಸಲಹೆ ನೀಡಿದ್ದಾರೆ. ಅದರಂತೆ ಮೊದಲಿಗೆ ಕಾವೇರಿ ನೀರು ಬಿಡುಗಡೆ ಪ್ರಶ್ನಿಸಿ ಕೂಡಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್​ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮಾಹಿತಿ ಕೊಟ್ಟಿದ್ದರು.

ಇದನ್ನೂ ಓದಿ: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್​: ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಏನೇನಾಯ್ತು.. ಇಲ್ಲಿದೆ ಕಂಪ್ಲೀಟ್ ವರದಿ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ನಿನ್ನೆ ಕರೆ ನೀಡಿದ್ದ ಕರ್ನಾಟಕ ಬಂದ್​ಗೆ ಕಾವೇರಿ ಕೊಳ್ಳದ ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ಕೋಲಾರ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಸೇರಿದಂತೆ ಚಿತ್ರನಟರು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ರಸ್ತೆಗಿಳಿದು ಹೋರಾಟ ಮಾಡಿದ್ದರು.

ಈ ನಡುವೆ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ ಬಗ್ಗೆ ಉತ್ತರ ನೀಡುತ್ತಾ, ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವ ಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮದವರಿಗೂ ಅನ್ಯಾಯವಾಗುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

Last Updated : Sep 30, 2023, 8:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.