ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿ ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಇದೀಗ ಅಧಿಕೃತ ಆದೇಶವನ್ನು ಸಹ ಹೊರಡಿಸಿದೆ.
![government imposed lockdown on sunday](https://etvbharatimages.akamaized.net/etvbharat/prod-images/kn-bng-02-sundaylockdown-order-script-7201951_28062020171309_2806f_1593344589_966.jpg)
ಅದೇ ರೀತಿ ಅಗತ್ಯ ಸೇವೆಗಳನ್ನು ನೀಡುವ ಇಲಾಖೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಸರ್ಕಾರಿ ಇಲಾಖೆಗಳು, ಕಚೇರಿಗಳು, ನಿಗಮ ಮಂಡಳಿಗಳು ಜುಲೈ 10 ರಿಂದ ಆಗಸ್ಟ್ 8ರ ವರೆಗೆ ಎಲ್ಲಾ ಶನಿವಾರ ಮುಚ್ಚುವಂತೆ ನಿರ್ದೇಶನ ನೀಡಲಾಗಿದೆ. ಅದೇ ರೀತಿ ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿರುವ ಸರ್ಕಾರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಿದೆ. ಈ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆ ಹೊರತುಪಡಿಸಿ ಜನರ ಚಲನವಲನಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.