ETV Bharat / state

ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಕೋಲೆ ಬಸವನಂತೆ ಆಗಿದೆ: ಹೆಚ್.ಡಿ. ಕುಮಾರಸ್ವಾಮಿ

ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಏಕೆ ಮಾಡುತ್ತಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ಪ್ರಶ್ನಿಸಿದ್ದಾರೆ.

H.D. Kumaraswamy
ಹೆಚ್.ಡಿ. ಕುಮಾರಸ್ವಾಮಿ
author img

By

Published : Jul 27, 2022, 3:42 PM IST

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರೆದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ? ಎಂದು ಸರ್ಕಾರವನ್ನು ಹೆಚ್​ಡಿಕೆ ಪ್ರಶ್ನೆ ಮಾಡಿದ್ದಾರೆ.

  • ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. 8/8#ಸರ್ವ_ಜನಾಂಗದ_ಶಾಂತಿಯ_ತೋಟ

    — H D Kumaraswamy (@hd_kumaraswamy) July 27, 2022 " class="align-text-top noRightClick twitterSection" data=" ">

ಪ್ರತಿ ಕೊಲೆ ಅದ ಮೇಲೆ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ ಏಕೆ?. ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ. ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ. ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ. ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ.

ಇದನ್ನೂ ಓದಿ: Praveen murder case.. ಕೇರಳಕ್ಕೆ ಹೋಗಿ ಆರೋಪಿಗಳನ್ನು ಬಂಧಿಸುವಂತೆ ಸಿಎಂ ಸೂಚನೆ

ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ಧೈರ್ಯ ಇಲ್ಲ.

ಈ ಅಸಹಾಯಕತೆಗೆ ಕಾರಣ ಏನು?: ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ ಎಂದಿದ್ದಾರೆ. ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.