ETV Bharat / state

ಪ್ರವಾಹ ಪೀಡಿತ ಜನರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸನ್ನದ್ಧ: ಪಾಟೀಲ್ ಪತ್ರಕ್ಕೆ ಸಿಎಂ ಉತ್ತರ

author img

By

Published : Aug 4, 2019, 5:25 PM IST

ಪ್ರವಾಹ ಪೀಡಿತ ಪ್ರದೇಶಗಳ ಜನರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮಾಜಿ ಸಚಿವ ಎಚ್​.ಕೆ ಪಾಟೀಲ್​ ಬರೆದಿದ್ದ ಪತ್ರಕ್ಕೆ ಸಿಎಂ ಯಡಿಯೂರಪ್ಪ ಉತ್ತರಿಸಿದ್ದಾರೆ.

ಎಚ್.ಕೆ.ಪಾಟೀಲ್ ಪತ್ರಕ್ಕೆ ಸಿಎಂ ಪ್ರತ್ಯುತ್ತರ

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ಪ್ರತಿಯಾಗಿ ಪತ್ರ ಬರೆದು ಜನರ ಸಂಕಷ್ಟಕ್ಕೆ ಸ್ಪಂದಿಸುವ ಭರವಸೆ ಕೊಟ್ಟಿದ್ದಾರೆ.

ಹೆಚ್‌ ಕೆ ಪಾಟೀಲ್ ಪತ್ರಕ್ಕೆ ಉತ್ತರಿಸಿರುವ ಸಿಎಂ ಬಿಎಸ್​ವೈ, ಕೃಷ್ಣಾ ಕೊಳ್ಳಪ್ರದೇಶದಲ್ಲಿನ ಪ್ರವಾಹದಿಂದ ಉಂಟಾಗಿರುವ ಸಂಕಷ್ಟದ ಬಗ್ಗೆ ಬೆಳಕು ಚೆಲ್ಲಿದ್ದಕ್ಕೆ ಧನ್ಯವಾದಗಳು. ಆ ಭಾಗದ ಜನರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. ಜನ-ಜಾನುವಾರುಗಳ ರಕ್ಷಣೆ, ಆಸ್ತಿ‌ಪಾಸ್ತಿ ಹಾನಿ ಹಿನ್ನೆಲೆ ಪರಿಹಾರ ಕಲ್ಪಿಸಲು ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಹಾಗೂ ಯಾದಗಿರಿ ಜಿಲ್ಲಾಡಳಿತವನ್ನು ಸಜ್ಜುಗೊಳಿಸಲಾಗಿದೆ. ಭಾನುವಾರ ರಜಾ ದಿನವಾದರೂ ಪ್ರವಾಹ ಪೀಡಿತ ಐದು ಜಿಲ್ಲೆಗಳ ಡಿಸಿಗಳ ಜತೆ ತುರ್ತು ವಿಡಿಯೋ ‌ಕಾನ್ಫರೆನ್ಸ್ ಮಾಡಿ, ಸಲಹೆ ಸೂಚನೆಗಳನ್ನು ನೀಡಿದ್ದೇನೆ ಎಂದು ತಿಳಿಸಿದ್ರು.

cm
ಎಚ್.ಕೆ.ಪಾಟೀಲ್ ಪತ್ರಕ್ಕೆ ಸಿಎಂ ಪ್ರತ್ಯುತ್ತರ

ನಾಳೆ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ. ದೆಹಲಿ ಭೇಟಿ ವೇಳೆ ಕೇಂದ್ರ ಸಚಿವರನ್ನು ಭೇಟಿಯಾಗಿ ನೆರವು ಕೋರಲಿದ್ದೇನೆ. ರಾಜ್ಯದ ಸಂಸದರ ಜತೆ ಸಭೆ ನಡೆಸಿ ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರದ ಸಹಾಯ ಪಡೆಯಲು ಸಹಕರಿಸುವಂತೆ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ಗೆ ಸಿಎಂ ಭರವಸೆ ನೀಡಿದ್ದಾರೆ.

Intro:GgBody:KN_BNG_04_CMLETTER_HKPATILLETTER_SCRIPT_7201951

ಪ್ರವಾಹ ಪೀಡಿತ ಜಿಲ್ಲೆಗಳ ಜನರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸನ್ನದ್ಧ: ಎಚ್.ಕೆ.ಪಾಟೀಲ್ ಪತ್ರಕ್ಕೆ ಸಿಎಂ ಪ್ರತ್ಯುತ್ತರ

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮಾಜಿ ಸಚಿವ ಎಚ್.ಕೆ.ಪಾಟೀಲ್ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ಪ್ರತಿಯಾಗಿ ಪತ್ರ ಬರೆದು ಸ್ಪಷ್ಟೀಕರಣ ನೀಡಿದ್ದಾರೆ.

ಪತ್ರದಲ್ಲಿ ಸಿಎಂ, ನಿಮ್ಮ ಪತ್ರ ತಲುಪಿದೆ. ಕೃಷ್ಣಾ ಕೊಳ್ಳಪ್ರದೇಶದಲ್ಲಿನ ಪ್ರವಾಹದಿಂದ ಉಂಟಾಗಿರುವ ಸಂಕಷ್ಟದ ಬಗ್ಗೆ ಬೆಳಕು ಚೆಲ್ಲಿದ್ದಕ್ಕೆ ನಿಮಗೆ ಧನ್ಯವಾದಗಳು. ಆ ಭಾಗದ ಜನರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

ಜನ ಹಾಗೂ ಜಾನುವಾರುಗಳ ರಕ್ಷಣೆ, ಆಸ್ತಿ‌ಪಾಸ್ತಿಗಳ ಹಾನಿ ಹಿನ್ನೆಲೆ ಪರಿಹಾರ ಕಲ್ಪಿಸಲು ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಹಾಗೂ ಯಾದಗಿರಿ ಜಿಲ್ಲಾಡಳಿತವನ್ನು ಸಜ್ಜುಗೊಳಿಸಲಾಗಿದೆ. ಭಾನುವಾರ ರಜಾ ದಿನವಾದರೂ ಪ್ರವಾಹ ಪೀಡಿತ ಐದು ಜಿಲ್ಲೆಗಳ ಡಿಸಿಗಳ ಜತೆ ತುರ್ತು ವಿಡಿಯೋ ‌ಕಾನ್ಫರೆನ್ಸ್ ಮಾಡಿ, ಸಲಹೆ ಸೂಚನೆಗಳನ್ನು ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ. ದೆಹಲಿ ಭೇಟಿ ವೇಳೆ ಕೇಂದ್ರ ಸಚಿವರನ್ನು ಭೇಟಿಯಾಗಿ ನೆರವು ಕೋರಲಿದ್ದೇನೆ. ರಾಜ್ಯದ ಸಂಸದರ ಜತೆ ಸಭೆ ನಡೆಸಿ ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರದ ಸಹಾಯ ಪಡೆದುಕೊಳ್ಳಲು ಸಹಕರಿಸುವಂತೆ ಮನವಿ ಮಾಡಲಿದ್ದೇನೆ. ರಾಜ್ಯದ ಜನರ ಸಂಕಷ್ಟಗಳಿಗೆ ಮತ್ತು ತುರ್ತು ಅಗತ್ಯಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಸಿದ್ಧವಾಗಿದೆ ಮತ್ತು ಪರಿಹಾರ ದೊರಕಿಸಿಕೊಡಲು ಬದ್ಧವಾಗಿದೆ ಎಂದು ಪತ್ರದಲ್ಲಿ ಹಿರಿಯ ಮುಖಂಡ ಎಚ್.ಕೆ.ಪಾಟೀಲ್ ಗೆ ಭರವಸೆ ನೀಡಿದ್ದಾರೆ.Conclusion:Gg
ETV Bharat Logo

Copyright © 2024 Ushodaya Enterprises Pvt. Ltd., All Rights Reserved.