ETV Bharat / state

'ದೇವರೇ ಕಾಪಾಡಬೇಕು..' ಹೇಳಿಕೆಗೆ ಸಚಿವ ಶ್ರೀರಾಮುಲು ಸ್ಪಷ್ಟೀಕರಣ - Minister Sriramulu

ಸರ್ಕಾರ ನಡೆಸಲು ಆಗದೆ ಇದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾತಿಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್​​ ಮೂಲಕ ತಿರುಗೇಟು ನೀಡಿದ್ದಾರೆ.

ಆರೋಗ್ಯ ಸಚಿವ ಬಿ. ಶ್ರೀರಾಮುಲು
ಆರೋಗ್ಯ ಸಚಿವ ಬಿ. ಆರೋಗ್ಯ ಸಚಿವ ಬಿ. ಶ್ರೀರಾಮುಲು
author img

By

Published : Jul 16, 2020, 4:54 PM IST

Updated : Jul 16, 2020, 5:18 PM IST

ಬೆಂಗಳೂರು: ಸೋಂಕು ಹೆಚ್ಚಾಗಲು ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷದ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿನ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಮ್ಮ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಆರೋಗ್ಯ ಸಚಿವ ಬಿ. ಶ್ರೀರಾಮುಲು

ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಇದು ಅತ್ಯಂತ ಮಹತ್ವದ ಪಾತ್ರವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ ಎಂದು ಹೇಳುವ ಸಂದರ್ಭದಲ್ಲಿ, ಇನ್ನೂ ಎಡವಿದರೆ ದೇವರೇ ಕಾಪಾಡಬೇಕು ಎಂದು ಹೇಳಿದ ಎಚ್ಚರಿಕೆಯ ಮಾತುಗಳವು ಎಂದರು. ಈ ರೀತಿ ಹೇಳುವ ಮೂಲಕ ಸರ್ಕಾರ ನಡೆಸಲು ಆಗದೆ ಇದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ, ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತಿಗೆ ಸ್ಪಷ್ಟೀಕರಣ ನೀಡಿದ್ರು.

  • 3/3
    ಸರ್ಕಾರ, ನಮ್ಮ ಮುಖ್ಯಮಂತ್ರಿಗಳಾದ @BSYBJP ಹಾಗೂ ಸಚಿವರುಗಳು ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ.

    — B Sriramulu (@sriramulubjp) July 16, 2020 " class="align-text-top noRightClick twitterSection" data=" ">

ಸರ್ಕಾರ, ನಮ್ಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಶತಮಾನದ ಸವಾಲನ್ನು ಸಮರ್ಥವಾಗಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ ಇದು ಎಂದು ಡಿ.ಕೆ. ಶಿವಕುಮಾರ್ ಆರೋಪಕ್ಕೆ‌ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.

Last Updated : Jul 16, 2020, 5:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.