ETV Bharat / state

ಮೈಸೂರು ರೇಸ್ ಕ್ಲಬ್​​ಗೆ ಭೂಮಿ ಗುತ್ತಿಗೆ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - Government land lease to Mysore Race Club

1970ರಲ್ಲಿ ಕುರುಬರಹಳ್ಳಿಯ ಸರ್ವೆ ನಂ. 5 ಮತ್ತು 74ರಲ್ಲಿನ 139.39 ಎಕರೆ ಸರ್ಕಾರಿ ಭೂಮಿಯನ್ನು ಕುದುರೆ ರೇಸ್ ಚಟುವಟಿಕೆಗಾಗಿ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್‌ಗೆ ಲೋಕೋಪಯೋಗಿ ಇಲಾಖೆ ಗುತ್ತಿಗೆ ನೀಡಿದೆ. ಆ ಗುತ್ತಿಗೆ 2016ರಲ್ಲಿ ಮುಕ್ತಾಯವಾಗಿದ್ದು, ಮತ್ತೆ 2016ರಿಂದ 2046ರವರೆಗೆ 2020ರ ಜನವರಿಯಲ್ಲಿ ಗುತ್ತಿಗೆ ನೀಡಲಾಗಿದೆ.

government-land-lease-to-mysore-race-club-news
ಹೈಕೋರ್ಟ್ ನೋಟಿಸ್
author img

By

Published : Nov 26, 2020, 9:36 PM IST

ಬೆಂಗಳೂರು: ಮೈಸೂರು ನಗರದ ಕುರುಬರಹಳ್ಳಿಯಲ್ಲಿ ಸರ್ಕಾರದ 139 ಎಕರೆ ಭೂಮಿಯನ್ನು 30 ವರ್ಷಗಳವರೆಗೆ ಅವೈಜ್ಞಾನಿಕ ಆಧಾರದಲ್ಲಿ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್​​ಗೆ ಗುತ್ತಿಗೆ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಸರ್ಕಾರದ ಗುತ್ತಿಗೆ ಆದೇಶ ರದ್ದು ಕೋರಿ ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ಹಾಗೂ ಮೈಸೂರು ರೇಸ್ ಕ್ಲಬ್​​ಗೆ ನೋಟಿಸ್ ಜಾರಿ ಮಾಡಿತು.

ಅಲ್ಲದೆ ಯಾವ ನಿಯಮಗಳ ಆಧಾರದಲ್ಲಿ ಭೂಮಿಯನ್ನು 30 ವರ್ಷ ಗುತ್ತಿಗೆ ನೀಡಲಾಗಿದೆ. ಗುತ್ತಿಗೆಗೆ ಪ್ರತಿಫಲವಾಗಿ ಕ್ಲಬ್ ವಾರ್ಷಿಕವಾಗಿ ಗಳಿಸುವ ಆದಾಯದ ಶೇ. 2ರಷ್ಟನ್ನು ಬಾಡಿಗೆಯಾಗಿ ನಿಗದಿಪಡಿಸಲಾಗಿದೆ. ಅದರಂತೆ ಕ್ಲಬ್ ಒಂದು ವೇಳೆ ಆದಾಯ ಗಳಿಸದಿದ್ದರೆ ಬಾಡಿಗೆ ನೀಡುವಂತಿಲ್ಲವೇ ಎಂದು ಪ್ರಶ್ನಿಸಿತು. ಈ ಎಲ್ಲಾ ವಿಚಾರವಾಗಿ ಸ್ವಷ್ಟನೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ಜಮೀನಿನ ಉಪ ಗುತ್ತಿಗೆ ಪಡೆದಿರುವ ಜಯ ಚಾಮರಾಜೇಂದ್ರ ಗಾಲ್ಫ್ ಕ್ಲಬ್​ಅನ್ನು ಪ್ರತಿವಾದಿಯಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿ, ವಿಚಾರಣೆ ಮುಂದೂಡಿತು.

ಅರ್ಜಿ ಸಾರಾಂಶ:

1970ರಲ್ಲಿ ಕುರುಬರಹಳ್ಳಿಯ ಸರ್ವೆ ನಂ. 5 ಮತ್ತು 74ರಲ್ಲಿನ 139.39 ಎಕರೆ ಸರ್ಕಾರಿ ಭೂಮಿಯನ್ನು ಕುದುರೆ ರೇಸ್ ಚಟುವಟಿಕೆಗಾಗಿ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್‌ಗೆ ಲೋಕೋಪಯೋಗಿ ಇಲಾಖೆ ಗುತ್ತಿಗೆ ನೀಡಿದೆ. ಆ ಗುತ್ತಿಗೆ 2016ರಲ್ಲಿ ಮುಕ್ತಾಯವಾಗಿದ್ದು, ಮತ್ತೆ 2016ರಿಂದ 2046ರವರೆಗೆ 2020ರ ಜನವರಿಯಲ್ಲಿ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಮಂಜೂರು ಪ್ರಕ್ರಿಯೆ ಕಾನೂನು ಪ್ರಕಾರವಾಗಿಲ್ಲ.

ಕಂದಾಯ ಇಲಾಖೆ ಅಧೀನದಲ್ಲಿರುವ ಭೂಮಿಯನ್ನು ಅನಧಿಕೃತವಾಗಿ ಲೋಕೋಪಯೋಗಿ ಇಲಾಖೆಯ ಕಾರ್ಯಕಾರಿ ಎಂಜಿನಿಯರ್ ಕ್ಲಬ್​​ಗೆ ಅನುಕೂಲವಾಗುವ ರೀತಿಯಲ್ಲಿ ಗುತ್ತಿಗೆ ಮಾಡಿಕೊಡುತ್ತಿದ್ದಾರೆ. ಈ ಜಾಗ ಲೋಕೋಪಯೋಗಿ ಇಲಾಖೆಗೆ ಸೇರಿದ್ದಲ್ಲ. ಇನ್ನು ಕ್ಲಬ್‌ನ ವಾರ್ಷಿಕ ಆದಾಯದ ಶೇ. 2ರಷ್ಟು ಹಣವನ್ನು ಮಾತ್ರ ಬಾಡಿಗೆ ನೀಡುವಂತೆ ಒಪ್ಪಂದ ಮಾಡಿಕೊಂಡಿರುವುದು ಅವೈಜ್ಞಾನಿಕವಾಗಿದೆ. ಕಡಿಮೆ ಮೊತ್ತಕ್ಕೆ ಗುತ್ತಿಗೆ ನೀಡಿರುವುದರಿಂದ ಸರ್ಕಾರಕ್ಕೂ ನಷ್ಟವಾಗಿದೆ. ಆದ್ದರಿಂದ ಗುತ್ತಿಗೆ ನವೀಕರಣ ಆದೇಶ ರದ್ದುಪಡಿಸಬೇಕು ಹಾಗೂ ಈವರೆಗಿನ ನಷ್ಟವನ್ನು ವಸೂಲಿ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.