ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯೇ ಐಎಂಎ ಸಂಸ್ಥೆಯ ಅವ್ಯವಹಾರದಲ್ಲಿ ತೊಡಗಿದ್ದರಿಂದ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೇಮಕ ಮಾಡಿದೆ.
ಐಎಂಎ ವಂಚನೆ ಪ್ರಕರಣ ಬರೀ ಬೆಂಗಳೂರಿಗಷ್ಟೇ ಸೀಮಿತವಾಗದೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ನಡೆದಿತ್ತು. ಹಾಗಾಗಿ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತೆ ವಿ.ರಶ್ಮಿ ಅವರನ್ನು ನೇಮಕ ಮಾಡಿರುವ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಹಣಕಾಸು ಅವ್ಯವಹಾರ ತಡೆಗಟ್ಟಲು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಬಿ.ಎಂ ವಿಜಯ ಶಂಕರ್ ಅವರನ್ನು ಸಕ್ಷಮ ಪ್ರಾಧಿಕಾರ ಅಧಿಕಾರಿಯನ್ನಾಗಿ ಸರ್ಕಾರ ನೇಮಿಸಿತ್ತು. ಆದರೆ, ಐಎಂಎ ವಂಚನೆ ಪ್ರಕರಣದಲ್ಲಿ ಅವರ ಹೆಸರೂ ಕೂಡ ಕೇಳಿ ಬಂದ ಕಾರಣ ಎಸ್‌ಐಟಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ.