ETV Bharat / state

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ಸರ್ಕಾರದ ಆದೇಶ - ಈಟಿವಿ ಭಾರತ ಕನ್ನಡ

ಆಗಸ್ಟ್ 15ರಂದು ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡಲು ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿಗೆ ಅನುಮತಿ ನೀಡಲಾಗಿದೆ.

government-order-for-flag-hoisting-at-chamrajpet-idgah-maidan
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ಸರ್ಕಾರದ ಆದೇಶ
author img

By

Published : Aug 12, 2022, 6:07 PM IST

ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದ ವತಿಯಿಂದ ಧ್ಚಜಾರೋಹಣ ಮಾಡಲು ಆದೇಶ ಹೊರಡಿಸಲಾಗಿದೆ. ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿಗೆ ಅನುಮತಿ ನೀಡಲಾಗಿದೆ.

ಚಾಮರಾಜಪೇಟೆ ಆಟದ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಚರಿಸಲು ಅನುಮತಿ ನೀಡಬೇಕೆಂದು ಕೋರಿ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದ್ದರು. ವಿವಿಧ ಸಂಘಟನೆಗಳಿಗೆ ಧ್ವಜಾರೋಹಣ ಮಾಡಲು ಅನುಮತಿ ನೀಡಿದಲ್ಲಿ, ಶಾಂತಿಭಂಗವಾಗುವ ಸಾಧ್ಯತೆಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲು ಅನುಮತಿ ಕೋರಲಾಗಿತ್ತು. ಅದರಂತೆ ಇದೀಗ ಈದ್ಗಾ ಮೈದಾನದಲ್ಲಿ ಉಪವಿಭಾಗಾಧಿಕಾರಿಗೆ ಧ್ವಜಾರೋಹಣ ಮಾಡುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ನಾನು ಅಪಮಾನ ಮಾಡಿಲ್ಲ​: ಸಚಿವ ಬಿ ಸಿ ನಾಗೇಶ್ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.