ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿರುವ 95 ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ರಾಜ್ಯದ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆ ಪರಿಶೀಲಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆರ್ಥಿಕ ಇಲಾಖೆಯ ಅನುಮತಿ ಪಡೆದು ಈಗಾಗಲೇ ಐದು ಶಾಲೆಗಳ ಉನ್ನತೀಕರಣಕ್ಕೆ ಆದೇಶಿಸಿತ್ತು. ಇದೀಗ ಉಳಿದ 95 ಶಾಲೆಗಳ ಉನ್ನತೀಕರಣಕ್ಕೆ ಮಂಜೂರಾತಿ ನೀಡಿದೆ.
ಹಾವೇರಿ, ಯಾದಗಿರಿ ಜಿಲ್ಲೆಗಳ ತಲಾ 16 ಶಾಲೆಗಳು, ಬಳ್ಳಾರಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ತಲಾ 11 ಶಾಲೆಗಳು, ಬೆಳಗಾವಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ತಲಾ 6, ಕಲಬುರಗಿ-4, ವಿಜಯಪುರ-5, ಗದಗ ಮತ್ತು ಬಾಗಲಕೋಟೆ ಜಿಲ್ಲೆಯ ತಲಾ 2- ಧಾರವಾಡ-3, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ದಕ್ಷಿಣ, ಶಿರಸಿ ಶೈಕ್ಷಣಿಕ ಜಿಲ್ಲೆಗಳ ತಲಾ ಒಂದು ಶಾಲೆಯನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲಾಗಿದೆ.
ಇದನ್ನೂ ಓದಿ: ಬೆಳಗ್ಗೆ ಹೊರಡಿಸಿದ್ದ ಆದೇಶ ಸಂಜೆ ವೇಳೆಗೆ ರದ್ದು.. ಸಚಿವ ಆನಂದ್ ಸಿಂಗ್ಗೆ ಶಾಕ್ ನೀಡಿದ ಸಿಎಂ