ETV Bharat / state

ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಬಳಕೆ ಕಡ್ಡಾಯಗೊಳಿಸಿ ಸರ್ಕಾರದ ಖಡಕ್​ ಆದೇಶ - ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶ

ಆದೇಶ ಪ್ರತಿಯಲ್ಲಿ ಸಮವಸ್ತ್ರ ಸಂಬಂಧ ನ್ಯಾಯಾಲಯಗಳ ಆದೇಶಗಳನ್ನು ಉಲ್ಲೇಖಿಸಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕರೂಪ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ..

government-orders-mandate-uniforms-in-government-schools
ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಖಡಕ್​ ಆದೇಶ
author img

By

Published : Feb 5, 2022, 7:22 PM IST

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಗಲಾಟೆ ತೀವ್ರತೆ ಪಡೆಯುತ್ತಿರುವುದನ್ನು ಮನಗಂಡ ಸರ್ಕಾರ ಇದೀಗ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯವಾಗಿ ಬಳಸಲು ಆದೇಶ ನೀಡಿದೆ.

ಕರಾವಳಿ ಭಾಗದ ಶಾಲೆಗಳಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆಯುತ್ತಿದೆ. ಇದರಿಂದ ಎಚ್ಚೆತ್ತು ರಾಜ್ಯ ಸರ್ಕಾರ ಇದೀಗ ಸಮವಸ್ತ್ರ ಸಂಬಂಧ ಸ್ಪಷ್ಟ ಆದೇಶ ಹೊರಡಿಸಿದೆ. ಅದರಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯವಾಗಿ ಧರಿಸತಕ್ಕದ್ದು. ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸತಕ್ಕದ್ದು ಎಂದು ಖಡಕ್ ನಿರ್ದೇಶನ ನೀಡಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ (CDC) ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸಬೇಕು. ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೇ ಇದ್ದಲ್ಲಿ, ಸಮಾನತೆ ಮತ್ತು ಐಕ್ಯತೆ ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸಿಕೊಳ್ಳಬೇಕು ಎಂದು ಆದೇಶಿಸಿದೆ.

ಆದೇಶ ಪ್ರತಿಯಲ್ಲಿ ಸಮವಸ್ತ್ರ ಸಂಬಂಧ ನ್ಯಾಯಾಲಯಗಳ ಆದೇಶಗಳನ್ನು ಉಲ್ಲೇಖಿಸಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕರೂಪ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಆದರೆ, ಕೆಲವು ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧರ್ಮದ ಅನುಸಾರ ಆಚರಣೆಗಳನ್ನು ಪಾಲಿಸುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಶಾಲಾ ಕಾಲೇಜುಗಳಲ್ಲಿ ಸಮಾನತೆ ಮತ್ತು ಏಕತೆಗೆ ಧಕ್ಕೆ ಬರುತ್ತಿರುವುದು ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿರುತ್ತದೆ ಎಂದು ತಿಳಿಸಲಾಗಿದೆ.

ಸುಪ್ರೀಂಕೋರ್ಟ್​, ವಿವಿಧ ರಾಜ್ಯಗಳ ಹೈಕೋರ್ಟ್ ಆದೇಶಗಳು: ವೈಯಕ್ತಿಕ ವಸ್ತ್ರ ಸಂಹಿತೆಗಿಂತ ಏಕರೂಪ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮತ್ತು ವಿವಿಧ ರಾಜ್ಯಗಳ ಹೈಕೋರ್ಟ್ ಮುಂದೆ ದಾಖಲಾದ ಕೆಲ ಪ್ರಕರಣಗಳನ್ನು ಉಲ್ಲೇಖಿಸಿದೆ. ಫಾತಿಮಾ ಹುಸೇನ್‌ ಸೈಯದ್ ವಿರುದ್ಧ ಭಾರತ್ ಎಜುಕೇಷನ್ ಸೊಸೈಟಿ ಮತ್ತು ಇತರರು ಪ್ರಕರಣದಲ್ಲಿ ಇದೇ ರೀತಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಕಾರ್ತಿಕ್ ಇಂಗ್ಲಿಷ್ ಸ್ಕೂಲ್, ಮುಂಬೈನಲ್ಲಿ ಸಮಸ್ಯೆ ಉದ್ಭವಿಸಿದ್ದು, ಸದರಿ ಸಮಸ್ಯೆಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಪರಿಶೀಲಿಸಿದ್ದು, ಈ ಶಾಲೆಯ ಪ್ರಾಂಶುಪಾಲರು ಅರ್ಜಿದಾರರಿಗೆ ಶಿರವಸ್ತ್ರ(Head scarf) ಹಾಕಿಕೊಂಡು ಅಥವಾ ತಲೆಯನ್ನು ಮುಚ್ಚಿಕೊಂಡು ಶಾಲೆಗೆ ಬರದಂತೆ ನಿರ್ದೇಶಿಸಿರುವುದು ಸಂವಿಧಾನದ ಅನುಚ್ಛೇದ 25ರ ಉಲ್ಲಂಘನೆ ಅಲ್ಲವೆಂದು ಅಂತಿಮವಾಗಿ ತೀರ್ಪು ನೀಡಿರುತ್ತದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ.

ಸುಪ್ರೀಂಕೋರ್ಟ್ ತೀರ್ಪನ್ನು ಅವಲೋಕಿಸಿ ಮದ್ರಾಸ್ ಹೈಕೋರ್ಟ್ ಸಹ ವಿ. ಕಮಲಮ್ಮ ವಿರುದ್ಧ ಡಾ.ಎಂಜಿಆರ್‌ ಮೆಡಿಕಲ್ ಯುನಿವರ್ಸಿಟಿ, ತಮಿಳುನಾಡು ಮತ್ತು ಇತರರು ಪ್ರಕರಣದಲ್ಲೂ ವಿಶ್ವವಿದ್ಯಾಲಯ ಮಾರ್ಪಾಡು ಮಾಡಿ ನಿಗದಿಪಡಿಸಿದ ವಸ್ತ್ರ ಸಂಹಿತೆಯ ನಿರ್ಧಾರವನ್ನು ಎತ್ತಿ ಹಿಡಿದಿದೆ. ಇದೇ ತರಹದ ವಿಷಯ ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ಎಂ.ವೆಂಕಟಸುಬ್ಬರಾವ್ ಮೆಟ್ರಿಕುಲೇಷನ್ ಹೈಯರ್ ಸೆಕೆಂಡರಿ ಸ್ಕೂಲ್ ಸ್ಟಾಫ್ ಅಸೋಸಿಯೇಷನ್ ವಿರುದ್ಧ ಎಂ.ವೆಂಕಟಸುಬ್ಬರಾವ್ ಮೆಟ್ರಿಕುಲೇಷನ್ ಹೈಯರ್ ಸೆಕೆಂಡರಿ ಸ್ಕೂಲ್ ಎಂಬ ಮತ್ತೊಂದು ಪ್ರಕರಣದಲ್ಲೂ ಸಹ ಪರಿಗಣಿತವಾಗಿದೆ.

ಸುಪ್ರೀಂಕೋರ್ಟ್ ಹಾಗೂ ವಿವಿಧ ರಾಜ್ಯಗಳ ಹೈಕೋರ್ಟ್ ತೀರ್ಪುಗಳನ್ವಯ ಶಿರವಸ್ತ್ರ (Head scarf) ಹಾಕಿಕೊಂಡು ಅಥವಾ ತಲೆಯನ್ನು ಮುಚ್ಚಿಕೊಂಡು ಶಾಲೆಗೆ ಬರದಂತೆ ನಿರ್ದೇಶಿಸಿರುವುದು ಸಂವಿಧಾನದ ಅನುಚ್ಛೇದ 25ರ ಉಲ್ಲಂಘನೆ ಅಲ್ಲವೆಂದಿರುವುದರಿಂದ ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು ಅದರಡಿ ರಚಿತವಾದ ನಿಯಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರ ಈ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮತ್ತೆ ನಿಲ್ಲದ ಡಿಕೆಶಿ-ಸಿದ್ದರಾಮಯ್ಯ ಶೀತಲ ಸಮರ.. ರಾಜ್ಯ ಕಾಂಗ್ರೆಸ್​ಗೆ ಮುಳುವಾಗಲಿದೆಯಾ ಜಟಾಪಟಿ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.