ETV Bharat / state

ಸರ್ಕಾರದ ಕಾರ್ಯಕ್ರಮಗಳಲ್ಲಿ ಹಾರ, ಹಣ್ಣಿನ ಬುಟ್ಟಿ, ಶಾಲು, ಕಾಣಿಕೆ ನೀಡಬಾರದು: ಸರ್ಕಾರದ ಸುತ್ತೋಲೆ - ಕರ್ನಾಟಕ ಸರ್ಕಾರ

ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಗೌರವ ಕಾಣಿಕೆಗಳನ್ನು ನೀಡಬಾರದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

government
ಸರ್ಕಾರ ಸುತ್ತೋಲೆ
author img

By

Published : Aug 10, 2021, 2:01 PM IST

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಅದರ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು. ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಟಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಲಾಗಿದೆ.

ಇದಕ್ಕೂ ಮುನ್ನ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.