ETV Bharat / state

‘6ನೇ ವೇತನ ಆಯೋಗ ಜಾರಿಯಿಲ್ಲ, ಸಂಧಾನವೂ ಇಲ್ಲ; ಮುಷ್ಕರ ನಡೆಸಿದ್ರೆ ಕಠಿಣ ಕ್ರಮ’

author img

By

Published : Apr 6, 2021, 1:22 PM IST

ಸಾರಿಗೆ ನೌಕರರು ಮುಷ್ಕರಕ್ಕೆ ಹೋದರೆ ಜನರಿಗೆ ಸಮಸ್ಯೆ ಆಗುತ್ತದೆ. ಅದನ್ನು ನಿರ್ವಹಣೆ ಮಾಡಲು ಇಲಾಖೆ ಸಿದ್ದವಾಗಿದೆ. ಇಡೀ ರಾಜ್ಯದಲ್ಲಿ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಸೇರಿದಂತೆ ಎಲ್ಲವನ್ನೂ ಪರವಾನಗಿ ಕೇಳದೆ ಸಂಚಾರಕ್ಕೆ ಅವಕಾಶ ಕಲ್ಪಿಸುತ್ತೇವೆ. ರೂಟ್,‌ ಪರ್ಮಿಟ್ ಇಲ್ಲದೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಎಸ್ಮಾ ಜಾರಿ ಮಾಡೋ ಬಗ್ಗೆ ಚರ್ಚೆ ನಡೆಸಿದ್ದೇವೆ, ಕಾನೂನು ಚೌಕಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಮತ್ತೆ ಸಂಧಾನ ಇಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿದರು.

government secretary on KSRTC Strike
‘ಮುಷ್ಕರ ನಡೆಸಿದರೆ ಎಸ್ಮಾ ಎಚ್ಚರಿಕೆ’

ಬೆಂಗಳೂರು: ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ. ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮರ್

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದರು. ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಅಧಿಕಾರಿಗಳ ಜೊತೆ ಸಾರಿಗೆ ನೌಕರರ ಮುಷ್ಕರದ ಕುರಿತು ಈ ವೇಳೆ ಚರ್ಚೆ ನಡೆಸಿದರು. ಪರ್ಯಾಯ ವ್ಯವಸ್ಥೆ ಕುರಿತು ಮಾತುಕತೆಯೂ ನಡೆಯಿತು.

'ಶೇ.8 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ದವಿದೆ'

ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಸಾರಿಗೆ ನೌಕರರು ಮುಷ್ಕರ ಕರೆ ಕೊಟ್ಟಿದ್ದಾರೆ. ಆ ಬಗ್ಗೆ ಸಿಎಂ ಸಭೆ ಮಾಡಿದ್ದಾರೆ. ಕೋವಿಡ್ ಪರಿಸ್ಥಿತಿಯಲ್ಲಿ ಮುಷ್ಕರಕ್ಕೆ ಹೋಗಬಾರದು ಅಂತ ಮನವಿ ಮಾಡುತ್ತಿದ್ದೇವೆ. 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆ ಈಡೇರಿಸಿದ್ದೇವೆ. 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಸಾಧ್ಯವಿಲ್ಲ. ಆದರೆ ಶೇ.8 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ದವಿದೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಈಗ ಘೋಷಣೆ ಮಾಡಲು ಆಗಲ್ಲ. ಚುನಾವಣಾ ಆಯೋಗ ಅನುಮತಿ ಕೊಟ್ಟರೆ ಘೋಷಣೆ ಮಾಡುತ್ತೇವೆ. ಇಲ್ಲದಿದ್ದಲ್ಲಿ ಚುನಾವಣೆ ಬಳಿಕ ಘೋಷಣೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ: ಸಚಿವ ಸವದಿ

ಸಾರಿಗೆ ನೌಕರರು ಮುಷ್ಕರಕ್ಕೆ ಹೋದರೆ ಜನರಿಗೆ ಸಮಸ್ಯೆ ಆಗುತ್ತದೆ. ಅದನ್ನು ನಿರ್ವಹಣೆ ಮಾಡಲು ಸಾರಿಗೆ ಇಲಾಖೆ ಸಿದ್ದವಾಗಿದೆ. ಇಡೀ ರಾಜ್ಯದಲ್ಲಿ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಸೇರಿದಂತೆ ಎಲ್ಲವನ್ನೂ ಪರವಾನಗಿ ಕೇಳದೆ ಸಂಚಾರಕ್ಕೆ ಅವಕಾಶ ಕಲ್ಪಿಸುತ್ತೇವೆ. ರೂಟ್,‌ಪರ್ಮಿಟ್ ಇಲ್ಲದೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ಅವರು ಹೇಳಿದರು.

ಎಸ್ಮಾ ಜಾರಿ ಮಾಡೋ ಬಗ್ಗೆ ಚರ್ಚೆ ನಡೆಸಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಮತ್ತೆ ಸಂಧಾನ ಇಲ್ಲ. ಪ್ರತಿನಿತ್ಯ 4 ಕೋಟಿ ನಷ್ಟ ಆಗುತ್ತಿದೆ. ಹಾಗಿದ್ದರೂ ಸಂಬಳ ನೀಡಿದ್ದೇವೆ. ಶೇ.8 ರಷ್ಟು ಹೈಕ್ ಮಾಡಲು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ. ಆದರೂ ಮುಷ್ಕರ ನಡೆಸಿದಲ್ಲಿ ಎ‌ನ್‌ಡಿಎಂಎ, ಎಸ್ಮಾ ಸೇರಿದಂತೆ ಯಾವುದಾದರೂ ಆಗಬಹುದು.‌ ಒಟ್ಟಿನಲ್ಲಿ ಕಠಿಣ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದರು.

ಮುಷ್ಕರದ ವೇಳೆ ಗುಂಪು ಗುಂಪು ಸೇರುವಂತಿಲ್ಲ. ಕೋವಿಡ್ ನಿಯಮ ಉಲ್ಲಂಘಿಸುವಂತಿಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವಂತಿಲ್ಲ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಗೆ ದರ ನಿಗದಿ ಮಾಡುತ್ತೇವೆ. ಆ ದರದಂತೆ ಹಣ ವಸೂಲಿ ಮಾಡಬೇಕು. ರಜೆ, ಹಬ್ಬ ಇರುವುದರಿಂದ ವಿಶೇಷ ರೈಲು ವ್ಯವಸ್ಥೆ ಮಾಡಲು ರೈಲ್ವೇ ಇಲಾಖೆ ಜೊತೆ ಮಾತನಾಡುತ್ತೇವೆ ಎಂದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.