ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮೈತ್ರಿ ಸರ್ಕಾರ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ತೊಂದರೆ ಆಗಲ್ಲ. ಮತ್ತೆ ಪ್ರಜಾಪ್ರಭುತ್ವದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತೆ ಅಂದರು.
ಇನ್ನು, ಇಷ್ಟೆಲ್ಲಾ ಅವಾಂತರಗಳಿಗೆ ಬಿಜೆಪಿ ರಾಷ್ಟ್ರೀಯ ನಾಯಕರ ಕೈವಾಡ ಕಾರಣವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಬಿಜೆಪಿ ಕಗ್ಗೊಲೆ ಮಾಡುತ್ತಿದೆ, ಇದು ಶೋಭೆ ತರುವಂತಹ ಕೆಲಸವಲ್ಲ ಎಂದು ಹರಿಹಾಯ್ದರು.