ETV Bharat / state

ರಾಜ್ಯದಲ್ಲೂ ಶೇ. 100ರಷ್ಟು ಪ್ರೇಕ್ಷಕರಿಗೆ ಸಿನಿಮಾ ಪ್ರದರ್ಶನಕ್ಕೆ ಸಿಗುತ್ತಾ ಅವಕಾಶ?

ಕನ್ನಡ ಚಿತ್ರರಂಗದ ಅಂಗವಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಹಾಗೂ ನಿರ್ಮಾಪಕ ವಲಯದ ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್, ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್, ಚರ್ಚೆಯ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.

author img

By

Published : Jan 5, 2021, 6:08 PM IST

Government to give cinema screenings to 100% audience news
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಬೆಂಗಳೂರು: ಕೊರೊನಾದಿಂದಾಗಿ ತತ್ತರಿಸಿ ಹೋಗಿದ್ದ ಚಿತ್ರರಂಗ ಇನ್ನೂ ಕೊರೊನಾ ಭಯದಿಂದ ಹೊರ ಬಂದಿಲ್ಲ. ಕನ್ನಡದಲ್ಲಷ್ಟೇ ಅಲ್ಲ, ದೇಶದ ಯಾವ ಚಿತ್ರರಂಗದಲ್ಲೂ ಸ್ಟಾರ್ ನಟರ ಚಿತ್ರಗಳು ರಿಲೀಸ್ ಮಾಡಲು ಮನಸ್ಸು ಮಾಡಿಲ್ಲ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಕೊರೊನಾದಿಂದಾಗಿ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಸಿನಿಮಾ ಪ್ರದರ್ಶನ ಮಾಡಬೇಕು ಎಂಬ ನಿಯಮ ಇದೆ. ಇದರಿಂದ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತಿರಲಿಲ್ಲ.

ಓದಿ: ಜನವರಿಗೂ ಚಿತ್ರಮಂದಿರ ಓಪನ್ ಆಗೋದು ಡೌಟು: ಓದುಗೌಡರ್

ಹೀಗಾಗಿ ಪಕ್ಕದ ತಮಿಳುನಾಡಿನಲ್ಲಿ ನಟ ದಳಪತಿ ವಿಜಯ್ ಮತ್ತು ವಿಜಯ್ ಸೇತುಪತಿ ಒಟ್ಟಿಗೇ ನಟಿಸಿರುವ ಮಾಸ್ಟರ್ ಸಿನಿಮಾ ಪೊಂಗಲ್‍ ಹಬ್ಬಕ್ಕೆ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ವಿಜಯ್ ತಮಿಳುನಾಡು ಸಿಎಂ ಜೊತೆ ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಪ್ರೇಕ್ಷಕರು ಬರುವಂತೆ ಅನುಮತಿ ಕೇಳಿದ್ದರು. ಅದಕ್ಕೆ ತಮಿಳುನಾಡು ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಈಗ ಕನ್ನಡ ಚಿತ್ರರಂಗದಲ್ಲೂ 100 ಪರ್ಸೆಂಟ್ ಚಿತ್ರಮಂದಿರಗಳು ತೆರೆಯುವ ಸಾಧ್ಯತೆ ಇದೆ.

ಕನ್ನಡ ಚಿತ್ರರಂಗದ ಅಂಗವಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಹಾಗೂ ನಿರ್ಮಾಪಕ ವಲಯದ ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್, ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್ ಚರ್ಚೆಯ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.