ಬೆಂಗಳೂರು: ಖಾಸಗಿ ವಾಹನ ಮಾಲೀಕರ ಮನವಿ ಪುರಸ್ಕರಿಸಿರುವ ಸರ್ಕಾರ ಎಲ್ಲ ವಾಣಿಜ್ಯ ವಾಹನಗಳ ತೆರಿಗೆ ಪಾವತಿ ಡೆಡ್ಲೈನ್ ಮುಂದೂಡಿದೆ.
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಏ.15 ರೊಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ಏ.30ರ ವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.
ಸಾರಿಗೆ ಮುಷ್ಕರ ಹಿನ್ನೆಲೆ ಖಾಸಗಿ ವಾಹನಗಳನ್ನು ನೆಚ್ಚಿಕೊಂಡಿರುವ ಸರ್ಕಾರ, ಅವರ ಮನವಿ ಮೇರೆಗೆ ನಿಯಮದಲ್ಲಿ ಸಡಿಲಿಕೆ ಮಾಡಿದೆ. ಖಾಸಗಿ ವಾಣಿಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ವಾಹನ ಮಾಲೀಕರ ಬಹು ದಿನಗಳ ಬೇಡಿಕೆಯಾಗಿತ್ತು. ಈ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ದಂಡರಹಿತ ತೆರಿಗೆ ಪಾವತಿಗೆ ಅವಕಾಶ ಮಾಡಿಕೊಟ್ಟಿದೆ.
ಇದನ್ನೂ ಓದಿ: ಮಾಧ್ಯಮಗಳಲ್ಲಿ ಅಶ್ಲೀಲ ವಿಚಾರ ನಿರ್ಬಂಧಕ್ಕೆ ಶಾಸನ ರೂಪಿಸಲು ಕೋರಿ ಪಿಐಎಲ್ : ಕೇಂದ್ರಕ್ಕೆ ಕೋರ್ಟ್ ನೋಟಿಸ್