ಬೆಂಗಳೂರು: ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳಲು ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿದ್ದು, ಇದೀಗ ರಾಜ್ಯ ಸರ್ಕಾರ ಪ್ಲಾಸ್ಮಾ ದಾನಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ.
ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾಕ್ಕೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸೋಂಕು ಮುಕ್ತರಾದವರು 14 ದಿನಗಳ ಬಳಿಕ ತಮ್ಮ ರಕ್ತದಲ್ಲಿನ ಪ್ಲಾಸ್ಮಾ ಕಣಗಳನ್ನು ನೀಡಬಹುದು. ಪ್ಲಾಸ್ಮಾ ತೆಗೆದುಕೊಳ್ಳುವವರ ರಕ್ತದ ಗುಂಪು ಒಂದೇ ಆಗಿರಬೇಕು.
ರಾಜ್ಯದಲ್ಲಿ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 17,370ಕ್ಕೂ ಅಧಿಕವಾಗಿದ್ದು, ಗುಣಮುಖರಾದವರ ಪ್ಲಾಸ್ಮಾ ಅತ್ಯಂತ ಪರಿಣಾಮಕಾರಿಯಾಗಿದೆ. ಹೀಗಾಗಿ ದಾನ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ. ಈಗಾಗಲೇ 5 ಮಂದಿ ಸ್ವಯಂಪ್ರೇರಿತವಾಗಿ ಬಂದು ದಾನ ಮಾಡಿದ್ದು, ಇತರರು ಇಂತಹ ಕೆಲಸಕ್ಕೆ ಮುಂದಾಗಬೇಕು ಎಂದಿದ್ದಾರೆ.