ಬೆಂಗಳೂರು: ಶಾಸಕರು ಹಾಗೂ ಸಚಿವರು ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ದಾಖಲಿಸಲಾಗಿದ್ದ, 570 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ.
ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸಚಿವ ಸಂಪುಟದ ನಿರ್ಣಯ ಪ್ರಶ್ನಿಸಿ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ಅವರ ವಾದ ಆಲಿಸಿದ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಅಭಿಯೋಜನೆ ನಿರ್ದೇಶನಾಲಯದ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಪ್ರತಿವಾದಿಗಳು ಅರ್ಜಿಗೆ ಡಿಸೆಂಬರ್ 9 ರ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.
ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಎಸ್. ಉಮಾಪತಿ ವಾದಿಸಿ, ಜನಪ್ರತಿನಿಧಿಗಳ ವಿರುದ್ಧ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದ 570 ಕ್ರಿಮಿನಲ್ ಪ್ರಕರಣಗಳನ್ನು ಸಚಿವ ಸಂಪುಟದ ತೀರ್ಮಾನದ ಮೇಲೆ ರಾಜ್ಯ ಸರ್ಕಾರ ಹಿಂಪಡೆದಿದೆ. ಅಪರಾಧ ದಂಡ ಪ್ರಕ್ರಿಯಾ ಸಂಹಿತೆ( ಸಿಆರ್ಪಿಸಿ) ಸೆಕ್ಷನ್ 321 ಪ್ರಕಾರ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ. ಹೀಗಾಗಿ ಇದೊಂದು ಗಂಭೀರ ಲೋಪವಾಗಿದೆ.
ಅಲ್ಲದೆ, ಸರ್ಕಾರ ಹಿಂಪಡೆದ 570 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ. ಅದರಲ್ಲೂ ರಾಜಕಾರಣಿಗಳು ಮತ್ತವರ ಬೆಂಬಲಿಗರ ಮೇಲಿನ ಪ್ರಕರಣಗಳು ಸೇರಿವೆ. ಪೊಲೀಸ್ ಇಲಾಖೆ ಹಾಗೂ ಪ್ರಾಸಿಕ್ಯೂಷನ್ ಇಲಾಖೆಗಳ ಸಲಹೆಗಳಿಗೆ ವಿರುದ್ಧವಾಗಿ ರಾಜ್ಯ ಸರ್ಕಾರ ಈ ನಿರ್ಣಯ ಕೈಗೊಂಡಿದೆ. ಇದು ಕಾನೂನಿನ ಮತ್ತು ಅಧಿಕಾರದ ಸ್ಪಷ್ಟ ದುರ್ಬಳಕೆಯಾಗಿದೆ. ಆದ್ದರಿಂದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಮಾಡಿರುವ ಸರ್ಕಾರದ ಆದೇಶವನ್ನು ರದ್ದು ಪಡಿಸಬೇಕು ಎಂದು ಮನವಿ ಮಾಡಿದರು.
ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಎಸ್ ಉಮಾಪತಿ ವಾದಿಸಿ, ಜನಪ್ರತಿನಿಧಿಗಳ ವಿರುದ್ಧ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದ 570 ಕ್ರಿಮಿನಲ್ ಪ್ರಕರಣಗಳನ್ನು ಸಚಿವ ಸಂಪುಟದ ತೀರ್ಮಾನದ ಮೇಲೆ ರಾಜ್ಯ ಸರ್ಕಾರ ಹಿಂಪಡೆದಿದೆ. ಅಪರಾಧ ದಂಡ ಪ್ರಕ್ರಿಯಾ ಸಂಹಿತೆ( ಸಿಆರ್ಪಿಸಿ) ಸೆಕ್ಷನ್ 321 ಪ್ರಕಾರ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ. ಹೀಗಾಗಿ ಇದೊಂದು ಗಂಭೀರ ಲೋಪವಾಗಿದೆ.