ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ವಿಧಾನಸೌಧದಲ್ಲಿ ರಾಜೀನಾಮೆ ಘೋಷಣೆ ಮಾಡಿದ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದ ಬಿಎಸ್ವೈ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದರು.
ಓದಿ : ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ರಾಜ್ಯಪಾಲರಿಗೆ ಹಸ್ತಾಂತರ
ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ನಿಯಮದಂತೆ ಸಚಿವ ಸಂಪುಟ ವಿಸರ್ಜನೆಯಾಗಿದೆ. ನೂತನ ಸಿಎಂ ನೇಮಕವಾದ ಬಳಿಕ ಹೊಸ ಸಚಿವ ಸಂಪುಟ ರಚನೆಯಾಗಲಿದೆ.