ETV Bharat / state

ರಾಜ್ಯದೆಲ್ಲೆಡೆ ವಿಶ್ವ ದಾಖಲೆಯ ಯೋಗಥಾನ್‌: ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆ

ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ಯೋಗಥಾನ್ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧಾರವಾಡದಲ್ಲಿ ಸಭಾಪತಿ ಹೊರಟ್ಟಿ, ಶಿವಮೊಗ್ಗದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಕಾರ್ಯಕ್ರಮ ಉದ್ಘಾಟಿಸಿದರು.

Governor Gehlot inaugurates yogathon 2023
ಯೋಗಥಾನ್ ಕಾರ್ಯಕ್ರಮ: ರಾಜ್ಯಪಾಲ ಗೆಹ್ಲೋಟ್ ಚಾಲನೆ
author img

By

Published : Jan 15, 2023, 10:30 AM IST

Updated : Jan 15, 2023, 12:18 PM IST

ಯೋಗಥಾನ್‌ಗೆ ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಬೆಂಗಳೂರು/ಧಾರವಾಡ/ಶಿವಮೊಗ್ಗ/ವಿಜಯಪುರ: ರಾಜ್ಯದೆಲ್ಲೆಡೆ ಏಕಕಾಲದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಯೋಗಥಾನ್ ಕಾರ್ಯಕ್ರಮಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಂದು ಚಾಲನೆ ದೊರೆಯಿತು. 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ನಡೆಯಲಿರುವ ಯೋಗಥಾನ್ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಯೋಗಪಟುಗಳಿಗೆ ಕನ್ನಡದಲ್ಲಿ ಶುಭಾಶಯ ಕೋರಿ ಮಾತು ಆರಂಭಿಸಿದ ರಾಜ್ಯಪಾಲರು 'ಯೋಗ ಭಾರತೀಯ ಸಂಸ್ಕೃತಿ. ನಮ್ಮ ಸಂಸ್ಕ್ರತಿಯನ್ನು ರಕ್ಷಿಸುವ ಕೆಲಸ ಮಾಡಬೇಕು. ಯೋಗ ಕೇವಲ ವ್ಯಾಯಾಮವಲ್ಲ. ಅದು ಪರಿಸರದೊಂದಿಗೆ ಬೆರೆತು ನಡೆಸುವ ಒಂದು ಪ್ರಕ್ರಿಯೆ. ಕರ್ನಾಟಕ ಸರ್ಕಾರ ಯೋಗ ತರಬೇತಿ ಶಾಲೆಗಳನ್ನು ತೆರೆಯಲು, ಯೋಗಕ್ಕೆ ಪ್ರೇರೇಪಣೆ ನೀಡಲು ಸಾಕಷ್ಟು ಕೆಲಸ ಮಾಡುತ್ತಿದೆ. ಯುವಜನತೆ ನಮ್ಮ ಸಂಸ್ಕೃತಿಗಳಾದ ಯೋಗ, ವ್ಯಾಯಾಮದಂತಹ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಕಾರ್ಯಕ್ರಮದಿಂದ ಗಿನ್ನಿಸ್ ರೆಕಾರ್ಡ್ ಮಾಡಲು ಹೊರಟಿರುವ ಎಲ್ಲರಿಗೂ ಶುಭಾಶಯ' ಎಂದರು. ಕಾರ್ಯಕ್ರಮದಲ್ಲಿ ಕ್ರೀಡಾ ಹಾಗೂ ರೇಷ್ಮೆ ಇಲಾಖೆ ಸಚಿವ ನಾರಾಯಣ ಗೌಡ, ಬೆಂಗಳೂರು ನಗರ ಜಿಲ್ಲಾ ಡಿಸಿ ದಯಾನಂದ್ ಭಾಗಿಯಾಗಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಇದನ್ನೂ ಓದಿ: ಕಂಠೀರವ ಕ್ರೀಡಾಂಗಣದಲ್ಲಿ ಯೋಗಥಾನ್ 2022ಕ್ಕೆ ಚಾಲನೆ: ಗಿನ್ನೆಸ್ ದಾಖಲೆಗೆ ಮುನ್ನುಡಿ

ಧಾರವಾಡದಲ್ಲಿ ಸಭಾಪತಿ ಹೊರಟ್ಟಿ ಚಾಲನೆ: ಯೋಗಥಾನ್ ಗಿನ್ನಿಸ್ ದಾಖಲೆ ಕಾರ್ಯಕ್ರಮಕ್ಕೆ ಧಾರವಾಡದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡಿದರು. ಧಾರವಾಡ ನಗರದ ಆರ್​ಎನ್ ಶೆಟ್ಟಿ ಕ್ರೀಡಾಂಗಣ ಸೇರಿ ಮೂರು ಸ್ಥಳಗಳಲ್ಲಿ ಯೋಗಥಾನ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಬೇರೆ ಬೇರೆ ರಾಜ್ಯದ ಸಾವಿರಾರು ಯುವಕ ಯುವತಿಯರು ಭಾಗಿಯಾಗಿದ್ದರು.

ಯೋಗಥಾನ್ ಹಾಗೂ ರಾಷ್ಟ್ರೀಯ ಯುವಜನೋತ್ಸವಕ್ಕೆ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಗೈರು ಹಿನ್ನೆಲೆಯಲ್ಲಿ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು. ಸಚಿವರು ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದ್ರೆ ಬಂದಿಲ್ಲ, ಎಷ್ಟೋ ವರ್ಷಕ್ಕೆ ಒಮ್ಮೆ ನಡೆಯುವ ಕಾರ್ಯಕ್ರಮ ಇದು. ಆಯಾ ಸ್ಥಾನದಲ್ಲಿ ಇದ್ದವರು ಬಂದರೆ ಒಳ್ಳೆಯದು. ಮಂತ್ರಿಗಳು ಬಂದು ಇಲ್ಲಿನ ಜನರಿಗೆ ಸ್ಫೂರ್ತಿ ತುಂಬಬೇಕು. ಹೀಗಾಗಿ ಸಚಿವರು ಬಂದರೆ ಒಳ್ಳೆಯದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕವಿವಿ ಕುಲಪತಿ ಕೆ‌.ಬಿ.ಗುಡಸಿ, ಕುಲಸಚಿವ ಯಕ್ಷಪಾಲ ಕ್ಷೀರಸಾಗರ ಭಾಗಿಯಾಗಿದ್ದರು.

ಶಿವಮೊಗ್ಗದಲ್ಲಿ ಯೋಗಥಾನ್‌ಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ

ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಚಾಲನೆ: ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ದಾಖಲೆಯ ಯೋಗಥಾನ್ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಮಾಜಿ ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.

ವಿಜಯಪುರದಲ್ಲಿ ಯೋಗಥಾನ್

ವಿಶ್ವ ದಾಖಲೆಗಾಗಿ ವಿಜಯಪುರದಲ್ಲಿ ಯೋಗಥಾನ್​​: ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಸೈನಿಕ ಶಾಲೆ ಮೈದಾನದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಯೋಗಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಶಾಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು, ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ 25 ಸಾವಿರಕ್ಕಿಂತ ಅಧಿಕ ಮಂದಿ ಭಾಗವಹಿಸಿದ್ದರು.

ಸೈನಿಕ ಶಾಲೆಯ ಮೈದಾನದಲ್ಲಿ ಯೋಗಾಸನ ಮಾಡಲು ಒಟ್ಟು 9 ಬ್ಲಾಕ್ ಮಾಡಲಾಗಿತ್ತು. ಪ್ರತಿ ಬ್ಲಾಕ್​​ನಲ್ಲಿ ಸುಮಾರು 2 ಸಾವಿರ ಯೋಗಪಟುಗಳು ತಮ್ಮ ಯೋಗ ಪ್ರರ್ದಶನ ಮಾಡಿದರು. ಯೋಗ ಪಟು ಬಸನಗೌಡ ಹೊರನಾಳ ನೇತ್ವತೃದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಸದ ರಮೇಶ ಜಿಗಜಿಣಗಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 'ಯೋಗ ದೇಹದ ಆರೋಗ್ಯ ಕಾಪಾಡಲು ಪೂರಕವಾಗಿದೆ. ಹಿಂದಿನ ಕೇಂದ್ರದಲ್ಲಿದ್ದ ಸರ್ಕಾರಗಳು ಈ ಬಗ್ಗೆ ಚಿಂತಿಸಲಿಲ್ಲ. ಆದರೆ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಮೇಲೆ ವಿಶ್ವ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಕುರಿತು ಪ್ರಸ್ತಾವನೆ ಸಲ್ಲಿಸಿ, ಈಗ ಇಡೀ ಜಗತ್ತು ಯೋಗ ದಿನ ಆಚರಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ' ಎಂದರು.

25 ಸಾವಿರ ಯೋಗಪಟುಗಳು ಭಾಗಿ: ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವ ಮಾತನಾಡಿ, ಯೋಗಥಾನ್​ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ ಈ ಬಾರಿ ರಾಷ್ಟ್ರೀಯ ಯುವ ದಿನಾಚರಣೆ ಸಂದರ್ಭದಲ್ಲಿ ಆಚರಿಸಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಒಟ್ಟು 25 ಸಾವಿರ ಯೋಗಪಟುಗಳು ಭಾಗವಹಿಸಿದ್ದಾರೆ. ಗಿನ್ನಿಸ್ ದಾಖಲೆಯನ್ನು ಕರ್ನಾಟಕ ಈ ಬಾರಿ ದಾಖಲಿಸಲು ವಿಜಯಪುರ ಜಿಲ್ಲೆಯ ಕೊಡುಗೆ ಹೆಚ್ಚಿದೆ ಎಂದರು.‌

Last Updated : Jan 15, 2023, 12:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.